ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನರೇಂದ್ರ ಮೋದಿ #Narendra Modi ಸರ್ಕಾರದ ಮಹತ್ವಾಕಾಂಕ್ಷಿ ‘One Nation One Poll’ ಜಾರಿಗೆ ತರಲು ಸಿದ್ಧತೆ ಮುಂದುವರೆದಿದ್ದು, ಈ ಯೋಜನೆ ಅನುಷ್ಠಾನಕ್ಕಾಗಿ ಸಂವಿಧಾನದ ತಿದ್ದುಪಡಿಗೆ ಸಂಬಂಧಿಸಿದ ಎರಡು ಮಸೂದೆಗಳು ಸೇರಿ ಒಟ್ಟು ಮೂರು ಮಸೂದೆಗಳನ್ನು ಮಂಡಿಸಲು ಸರ್ಕಾರ ನಿರ್ಧರಿಸಿದೆ.
ಹೌದು… ತನ್ನ ಪ್ರಮುಖ ಕಾರ್ಯಸೂಚಿಯಾದ ‘ಒಂದು ದೇಶ–ಒಂದು ಚುನಾವಣೆ’ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ.

Also read: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ | ಬಳ್ಳಾರಿ ಜಿಲ್ಲೆ ಪ್ರವೇಶ ನಿರ್ಬಂಧ ತೆರವು | ಸುಪ್ರೀಂ ಆದೇಶ
ಕೋವಿಂದ್ ಸಮಿತಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಪ್ರಸ್ತಾಪಿಸಿತ್ತು. ಸಾರ್ವತ್ರಿಕ ಚುನಾವಣೆಯ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ನಡೆಸಬೇಕು ಎಂದು ಹೇಳಿತ್ತು.

ಇನ್ನು ಕೋವಿಂದ್ ಸಮಿತಿಯು ಮೂರು ವಿಧಿಗಳಿಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದೆ, ಅಸ್ತಿತ್ವದಲ್ಲಿರುವ ಲೇಖನಗಳಲ್ಲಿ 12 ಹೊಸ ಉಪವಿಭಾಗಗಳನ್ನು ಸೇರಿಸುವುದು ಮತ್ತು ಶಾಸಕಾಂಗ ಸಭೆಗಳೊಂದಿಗೆ ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದ ಮೂರು ಕಾನೂನುಗಳನ್ನು ತಿದಿದ್ದುಪಡಿ ಮಾಡುವುದಾಗಿದೆ. ಆ ಮೂಲಕ ಒಟ್ಟು ತಿದ್ದುಪಡಿಗಳು ಮತ್ತು ಹೊಸ ಅಳವಡಿಕೆಗಳ ಸಂಖ್ಯೆ 18ಕ್ಕೆ ಏರಿದಂತಾಗುತ್ತದೆ.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದು ಉದ್ದೇಶಿತ ಮಸೂದೆಗಳಲ್ಲೊಂದು. ಈ ಮಸೂದೆ ಅಂಗೀಕಾರಕ್ಕೆ ಕನಿಷ್ಠ ಶೇ. 50ರಷ್ಟು ರಾಜ್ಯಗಳ ಒಪ್ಪಿಗೆ ಅಗತ್ಯ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post