ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ಸೂಪರ್ ಸ್ಟಾರ್ ರಜನಿಕಾಂತ್ #Superstar Rajnikanth ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.
ನಿನ್ನೆ ತಡರಾತ್ರಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಬಿಗಡಾಯಿಸಿದ ಹಿನ್ನೆಲೆಯಲ್ಲಿ ತತಕ್ಷಣವೇ ಅವರನ್ನು ಚೆನ್ನೆÊನ ಆಯರ್ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈವರೆಗೂ ಆಸ್ಪತ್ರೆ ಅಥವಾ ರಜನಿಕಾಂತ್ ಕುಟುಂಬಸ್ಥರಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಆದರೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
Also read: 14 ಸೈಟ್ ಮೂಡಾಗೆ ಹಿಂತಿರುಗಿಸಲು ಸಿಎಂ ಪತ್ನಿ ನಿರ್ಧಾರ | ಬರೆದ ಪತ್ರದಲ್ಲಿದೆ ಈ ಅಂಶಗಳು
ರಜನಿಕಾಂತ್ ಅವರಿಗೆ ಕಾರ್ಡಿಯಾಕ್ ಕ್ಯಾಥ್ ಕ್ಯಾಬ್’ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗುತ್ತಿದೆ.
ಇನ್ನು ರಜನಿಕಾಂತ್ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಅಥವಾ ರಜನಿಕಾಂತ್ ಅವರ ಕುಟುಂಬದವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಇಂದು ಮಧ್ಯಾಹ್ನದ ವೇಳೆಗೆ ರಜನಿಕಾಂತ್ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ.
ತಮ್ಮ ನೆಚ್ಚಿನ ನಟ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್ ಮುಂಬರುವ ವೆಟ್ಟೈಯನ್ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post