ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಾಡಹಬ್ಬ ದಸರಾವನ್ನು ಶಿವಮೊಗ್ಗದಲ್ಲಿ #Shivamogga Dasara ಈ ಬಾರಿ ಅದ್ಧೂರಿಯಿಂದ ಆಚರಿಸಲಾಗುತ್ತಿದ್ದು, ಇದಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ಅ.3ರಂದು ಶಿವಮೊಗ್ಗ ದಸರಾಗೆ ಚಾಲನೆ ದೊರೆಯಲಿದ್ದು, ಅ.12ರಂದು ಅದ್ಧೂರಿ ದಸರಾ ಮಹೋತ್ಸವಕ್ಕೆ ಅಂತಿಮ ತೆರೆ ಬೀಳಲಿದೆ ಎಂದು ಶಾಸಕ ಚನ್ನಬಸಪ್ಪ #MLA Channabasappa ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.3ರಂದು ಬೆಳಗ್ಗೆ 9 ಗಂಟೆಗೆ ಮಹಾನಗರ ಪಾಲಿಕೆ ಆವರಣದಿಂದ ನಾಡದೇವಿ ಚಾಮುಂಡೇಶ್ವರಿಯ ಮೆರವಣಿಗೆ ಆರಂಭವಾಗಲಿದೆ. ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ. ದೇಗುಲದ ಆವರಣದಲ್ಲಿ ಸಿನಿಮಾ ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ #Sunil Kumar Desai ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದರು.
Also read: ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಪ್ರಾಚಾರ್ಯ ವಿಶ್ವನಾಥ ಸಲಹೆ

ಹಲವು ದಸರ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅ.7ರಂದು ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಟಿ ಭವ್ಯ ಭಾಗಿಯಾಗಲಿದ್ದಾರೆ. 14 ಉತ್ಸವ ಸಮಿತಿ ರಚಿಸಲಾಗಿದೆ, 68 ಚಟುವಟಿಕೆ ನಡೆಯಲಿದೆ. ಅಲ್ಲಮ ಪ್ರಭು ಮೈದಾನದಲ್ಲಿ ಬನ್ನಿ ಕಡೆಯಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 













Discussion about this post