ಕಲ್ಪ ಮೀಡಿಯಾ ಹೌಸ್ | ಮಿರ್ಜಾಪುರ |
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ಮಿರ್ಜಾಪುರದ ಕಚ್ವಾನ್ ಪ್ರದೇಶದ ಕಟ್ಕಾ ಗ್ರಾಮದ ಬಳಿ ವಾರಾಣಸಿ – ಪ್ರಯಾಗರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ, ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಮಿರ್ಜಾಪುರ) ಅಭಿನಂದನ್ ತಿಳಿಸಿದ್ದಾರೆ.
ಕಾರ್ಮಿಕರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ನಿಯಂತ್ರಣ ತಪ್ಪಿದ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Also read: ರವೀಂದ್ರನಗರ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ 15 ದಿನ ಶರನ್ನವರಾತ್ರಿ ಕಾರ್ಯಕ್ರಮ
ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತಪಟ್ಟವರೆಲ್ಲರೂ ವಾರಾಣಸಿ ನಿವಾಸಿಗಳು ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ. ಘಟನೆ ಬಳಿಕ ಸ್ಥಳದಲ್ಲಿ ಜನರ ಗುಂಪು ಜಮಾಯಿಸಿತ್ತು. ಮಾಹಿತಿ ಪಡೆದು ಪೊಲೀಸರೂ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಕಚವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post