ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಗತ್ಪ್ರಸಿದ್ಧ ಪಾರಂಪರಿಕ ಮೈಸೂರು ದಸರಾ #Mysore Dasara ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಮತ್ತಿತರರು ರಾಜಕೀಯ ಭಾಷಣಕ್ಕೆ ದುರ್ಬಳಕೆ ಮಾಡಿಕೊಂಡಿದ್ದನ್ನು ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯಾಧ್ಯಕ್ಷ ಎಸ್. ದತ್ತಾತ್ರಿ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನವರಾತ್ರಿ, ನಾಡಿನ ಸಂಸ್ಕೃತಿ, ಪರಂಪರೆ ಉಳಿಸುವ ಬಗ್ಗೆ ಮಾತನಾಡುವ ವೇದಿಕೆಯಲ್ಲಿ ಖ್ಯಾತ ಸಾಹಿತಿ ಡಾ. ಹಂಪನಾ, ಜಿ.ಟಿ.ದೇವೇಗೌಡ ಮೊದಲಾದವರು ಸಿಎಂಗೆ ಬಹುಪರಾಕ್ ಹಾಕಲು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಮುಡಾ ಹಗರಣಕ್ಕೆ #MUDA Scam ಸಂಬಂಧಿಸಿದಂತೆ, ಪ್ರಕರಣದಲ್ಲಿ ತಮ್ಮದೇನೂ ಪಾತ್ರ ಇಲ್ಲ ಎನ್ನುತ್ತಿದ್ದ ಸಿಎಂ, ಇಡಿ ಪ್ರವೇಶಿಸಿ ಇಸಿಐಆರ್ ದಾಖಲಿಸಿದ ತಕ್ಷಣ ನಿವೇಶನವನ್ನು ಮುಡಾಕ್ಕೆ ವಾಪಸ್ ಮಾಡುವುದರ ಮೂಲಕ ತಮ್ಮ ಬಣ್ಣ ಬಯಲು ಮಾಡಿಕೊಂಡರು ಎಂದು ಕುಟುಕಿದರು.

Also read: ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅನವರತ ಕಲಿಕೆಗೆ ವಿಪುಲ ಅವಕಾಶ ಡಾ. ರಂಗಸ್ವಾಮಿ ಅಭಿಮತ
ಸಿಎಂ ನಿವೇಶನ ಹಿಂತಿರುಗಿಸಿದ್ದು ಬಿಜೆಪಿ ಹೋರಾಟಕ್ಕೆ ಸಿಕ್ಕ ಮೊದಲ ಜಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಕುಂಠಿತವಾಗಿದೆ. ಸಿಎಂ ರಾಜಿನಾಮೆ ಸನ್ನಿಹಿತವಾಗಿದೆ ಎಂದು ಭವಿಷ್ಯ ನುಡಿದರು.

ಬಸವರಾಜ ಪಾಟಿಲ್ ಯತ್ನಾಳ್ ಸೇರಿದಂತೆ ಬಿಜೆಪಿಯ ಕೆಲ ಶಾಸಕರು ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸುವ ಹೇಳಿಕೆ ನೀಡುತ್ತಿದ್ದು ಸದ್ಯದಲ್ಲೇ ಅಂಥವರ ವಿರುದ್ಧ ಬಿಜೆಪಿ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದರು.
ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಕಾರ್ಯರ್ಶಿಗಳಾದ ಜ್ಞಾನೇಶ್ವರ್, ಜಗದೀಶ್, ಶಿವರಾಜ್, ವಿನ್ಸಂಟ್ ರಾಡ್ರಿಗ್ಸ್, ಪ್ರಮುಖರಾದ ವಿರೂಪಾಕ್ಷಪ್ಪ, ಜಯರಾಮು, ಹೃಷಿಕೇಶ್ ಪೈ, ಚಂದ್ರಶೇಖರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















Discussion about this post