No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜಾಗತಿಕ ಮಟ್ಟಕ್ಕೆ ಉದ್ಯಮವನ್ನು ಬೆಳೆಸಲು ತಂತ್ರಜ್ಞಾನ ಬಳಸಿಕೊಳ್ಳಿ: ಜಿಎಸ್‌ಟಿ ಉಪಆಯುಕ್ತೆ ಸಹನಾ ಬಾಳ್ಕಲ್ ಸಲಹೆ

ಹವ್ಯಕ ಉದ್ಯಮಿಗಳು ಹಾಗೂ ಕೈಗಾರೋದ್ಯಮಿಗಳ ಸಮಾವೇಶ

kalpa News by kalpa News
October 8, 2024
in ಬೆಂಗಳೂರು ನಗರ
0
ಜಾಗತಿಕ ಮಟ್ಟಕ್ಕೆ ಉದ್ಯಮವನ್ನು ಬೆಳೆಸಲು ತಂತ್ರಜ್ಞಾನ ಬಳಸಿಕೊಳ್ಳಿ: ಜಿಎಸ್‌ಟಿ ಉಪಆಯುಕ್ತೆ ಸಹನಾ ಬಾಳ್ಕಲ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಸ್ತುತ ಭಾರತ ದೇಶದಲ್ಲಿ ಉದ್ಯಮಕ್ಕೆ ಉತ್ತಮವಾದ ವಾತಾವರಣ ಹಾಗೂ ಬೆಂಬಲ ಇದೆ. ತೆರಿಗೆ ವ್ಯವಸ್ಥೆಯನ್ನು ಸರಳೀಕರಣ ಮಾಡಲಾಗುತ್ತಿದ್ದು, ಈ ಎಲ್ಲಾ ಅವಕಾಶಗಳನ್ನು  ಬಳಸಿಕೊಂಡು ಉದ್ಯಮಗಳನ್ನು ಯಶಸ್ವಿಯಾಗಿ ಬೆಳೆಸಬಹುದು ಎಂದು GST ಉಪ ಆಯುಕ್ತೆ ಸಹನಾ ಬಾಳ್ಕಲ್ ಹೇಳಿದರು.

ಬೆಂಗಳೂರಿನ ಹವ್ಯಕ ಭವನದಲ್ಲಿ ಶ್ರೀ ಅಖಿಲ‌ ಹವ್ಯಕ ಮಹಾಸಭೆಯಿಂದ ಆಯೋಜಿತವಾಗಿದ್ದ ‘ಹವ್ಯಕ ಉದ್ಯಮಿಗಳು ಹಾಗೂ ಕೈಗಾರೋದ್ಯಮಿಗಳ ಸಮಾವೇಶ’ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಹಜವಾಗಿ ಪರಿಸರದ ಪರಿಚಯ ಇರುವ ಮತ್ತು ವಿಶಿಷ್ಟ ಆಹಾರ ಸಂಸ್ಕೃತಿ ಹೊಂದಿರುವ ಹವ್ಯಕರು ಇಕೋಟೂರಿಸಮ್ ಹಾಗೂ  ಹವ್ಯಕ ಆಹಾರೋದ್ಯಮ ಇತ್ಯಾದಿಗಳನ್ನು ಸ್ಥಾಪಿಸುವತ್ತ  ಯೋಚಿಸಬಹುದು. ಇದು ತಂತ್ರಜ್ಞಾನದ ಯುಗವಾಗಿದ್ದು, ತಂತ್ರಜ್ಞಾನವನ್ನು ಬಳಸಿಕೊಂಡು ಜಾಗತಿಕ ಮಟ್ಟಕ್ಕೆ ಉದ್ಯಮವನ್ನು ಬೆಳೆಸಲು ಆಲೋಚಿಸಬೇಕು ಎಂದು ಸಲಹೆ ನೀಡಿದರು.

ಬಿಸಿನೆಸ್ ಬೈಯ್ ಬ್ರಾಹ್ಮಿಣ್ಸ್ (BBB) ಸಂಸ್ಥಾಪಕರಾದ ಅನಂತ ನಾಗರಾಜ್ ಮಾತನಾಡಿ, ನಮ್ಮ ಸಂಘಟನೆಗಳು ಕೇವಲ ಪೂಜೆ – ಪುನಸ್ಕಾರಗಳಿಗೆ ಸೀಮಿತವಾಗಬಾರದು. ಧಾರ್ಮಿಕತೆ ನಮ್ಮ ಮೂಲವೇ ಆದರೂ ಇಂದಿನ ಕಾಲಕ್ಕೆ ಅನುಸಾರವಾಗಿ ನಮ್ಮ ಸಂಘಟನೆಗಳು ವ್ಯಾಪಾರ – ಉದ್ದಿಮೆಗಳಿಗೂ ಪ್ರಾಶಸ್ತ್ಯ ನೀಡುವ ಅವಶ್ಯಕತೆ ಇದೆ.  ನಾವು ಸಂಘಟಿತರಾದಾಗ ಎಲ್ಲರೂ ಯಶಸ್ವಿಗಳಾಗಲು ಸಾಧ್ಯ. ಎಲ್ಲಾ ಕಥೆಗಳಲ್ಲೂ ‘ಬಡ ಬ್ರಾಹ್ಮಣನೊಬ್ಬನಿದ್ದನ್ನು’ ಎಂದು ಓದಿರುತ್ತೇವೆ. ನಾವು ‘ಬಡ’ ಬ್ರಾಹ್ಮಣರಾಗಿಯೇ ಇರದೇ, ‘ಬಡಾ’ ಬ್ರಾಹ್ಮಣರಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ, ಸ್ಟಾರ್ಟ್‌ಪ್ ಆರಂಭವಾದ ನಂತರ ವಿಷನ್ ಅಪ್ ಮಾಡಿ ಉದ್ಯಮವನ್ನು ಬೆಳಸಿದರೆ ಮಾತ್ರ ಯಶಸ್ಸು ಸಾಧ್ಯ. ಇಲ್ಲದಿದ್ದರೆ ಸ್ಟಾರ್ಟ್‌ಪ್’ಗಳು ಆರಂಭವಾದಲ್ಲೇ ಎಂಡ್ ಅಪ್ ಆಗುತ್ತದೆ. ಜಗತ್ತು AI ಬಗ್ಗೆ ಮಾತನಾಡುತ್ತಿದೆ. ಆದರೆ ನಮ್ಮ ಸಮಾಜ NI ಅನ್ನು ಹೊಂದಿದ್ದೇವೆ. NI ಎಂದರೆ ಸಹಜ ಬುದ್ಧಿಮತ್ತೆ ( Natural Intelligence) ಸಹಜ ಪ್ರತಿಭೆ ಸಮಾಜಕ್ಕೆ ಇರುವ ವರವಾಗಿದ್ದು, ಇದನ್ನು ಬಳಸಿಕೊಂಡು ನಾವು ವಯಕ್ತಿಕವಾಗಿ ಯಶಸ್ವಿಯಾಗುವುದಷ್ಟೇ ಅಲ್ಲದೇ ಜಗತ್ತಿನ ಒಳಿತಿಗೆ ಬಳಸಿಕೊಳ್ಳಬೇಕು ಎಂದರು.

ಡಿಸೆಂಬರ್ 27,28 ಹಾಗೂ 29 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, 7 ಕ್ಷೇತ್ರಗಳ 81 ಸಾಧಕರಂತೆ ಒಟ್ಟು 567  ಸಾಧಕರನ್ನು ಸನ್ಮಾನಿಸಲಾಗುವುದು. ಇದು ಹವ್ಯಕ ಸಮಾಜದ ವೈಶಿಷ್ಟ್ಯವನ್ನು ಜಗತ್ತಿನ ಮುಂದೆ ತೆರೆದಿಡುವ ಬೃಹತ್ ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದು ಮಾಹಿತಿ ನೀಡಿದರು.
ಸಣ್ಣ ಉದ್ದಿಮೆಗಳು ಇಂದು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳನ್ನು ಎದುರಿಸುವ ಮಾರ್ಗಗಳ ಬಗ್ಗೆ ಕಾಸಿಯಾ ಪ್ರಧಾನ ಕಾರ್ಯದರ್ಶಿ ಸುರೇಶ್ ಸಾಗರ್ ಮಾತನಾಡಿದರು.

ಕೃತಕ ಬುದ್ಧಿಮತ್ತೆ (AI) ಯ ಕುರಿತಾಗಿ ಸವಿಸ್ತಾರವಾಗಿ ವಿವರಿಸಿದ ಗೂಗಲ್’ನ ತಂತ್ರಜ್ಞ ನಾರಾಯಣ ಹೆಗಡೆ, ಕೃತಕ ಬುದ್ಧಿಮತ್ತೆಯನ್ನು ಉದ್ಯಮಗಳಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಹಾಗೂ ಕೃತಕ ಬುದ್ಧಿಮತ್ತೆಯ ಸಾಧಕ – ಭಾದಕಗಳ ಕುರಿತಾಗಿ ಚರ್ಚಿಸಿದರು.

ಟಯೋಟಾ ಇಂಡಸ್ಟ್ರೀಸ್’ನ ಡಿ.ಜಿ.ಎಮ್ ಸದಾನಂದ ಹರಿದಾಸ್ ಮಾತನಾಡಿ, ನಮ್ಮಲ್ಲಿ ಶ್ರೇಷ್ಠವಾದ ಬುದ್ಧಿಶಕ್ತಿಯಿದ್ದು, ಚಾಣಕ್ಯನಂತೆ ಚಲಬಿಡದೇ ತೊಡಗಿಸಿಕೊಂಡಾಗ ಯಶಸ್ಸು ನಮ್ಮದಾಗುತ್ತದೆ. ವಿಭಿನ್ನ ಪ್ರಯೋಗಗಳ ಮೂಲಕ ಉದ್ಯಮವನ್ನು ಜನಸ್ನೇಹಿಯಾಗಿಸಬಹುದು ಎಂದರು.
ಕೈಗಾರಿಕೋದ್ಯಮಿಗಳಿಗೆ ಸನ್ಮಾನ : ಯಶಸ್ವಿ ಉದ್ಯಮಿಗಳಾದ ಪ್ರಸನ್ನ ಶಾಸ್ತ್ರಿ, ರಾಮಕೃಷ್ಣ ನಿಸರಾಣಿ, ಲಕ್ಷ್ಮೀನಾರಾಯಣ ಹೆಗಡೆ, ನಾರಾಯಣ ಪ್ರಸನ್ನ ಹಾಗೂ ಕಿರಣ್ ಜಂಬಾನಿ ಅವರನ್ನು ಹವ್ಯಕ ಮಹಾಸಭೆಯಿಂದ ಗೌರವಿಸಿ; ಸನ್ಮಾನಿಸಲಾಯಿತು.

ಮಹಾಸಭೆಯ ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ ಹವ್ಯಕ ಮಹಾಸಭೆಯ ಕಾರ್ಯಚಟುವಟಿಕೆಗಳ ಕುರಿತಾಗಿ ಮಾಹಿತಿ ನೀಡಿ, ಕೈಗಾರಿಕೋದ್ಯಮಿಗಳು ಮಹಾಸಭೆಯ ಜೊತೆ ಕೈಜೋಡಿಸುವ ಕುರಿತು ಹಾಗೂ ಸಂಘಟಿತರಾಗುವ ಕುರಿತು ಮಾತುಗಳನ್ನಾಡಿದರು.
ಮಹಾಸಭೆಯ ಉಪಾಧ್ಯಕ್ಷರಾದ ಶ್ರೀಧರ ಭಟ್ ಕೆಕ್ಕಾರು, ಕಾರ್ಯದರ್ಶಿ ಪ್ರಶಾಂತ ಭಟ್ಟ ಮಲವಳ್ಳಿ, ಆದಿತ್ಯ ಹೆಗಡೆ ಕಲಗಾರು, ಸಂಚಾಲಕರಾದ ರಾಮಚಂದ್ರ ಭಟ್ ಕೆಕ್ಕಾರು ಹಾಗೂ ಶ್ರೀರಾಮ ಎಂ.ಎನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ   ಖ್ಯಾತ ಗಾಯಕ ಗಣೇಶ್ ದೇಸಾಯಿ ತಂಡದವರಿಂದ ನಡೆದ ‘ಭಾವಸಂಜೆ’ ಸಂಗೀತ ಕಾರ್ಯಕ್ರಮ ಜನಮನರಂಜಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

                                                     

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ದಸರಾ | ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ | ವಿಜೇತರಿಗೆ ಶಾಸಕ ಚನ್ನಬಸಪ್ಪ ಪ್ರೋತ್ಸಾಹ

Next Post

ಜೋಗ ಜಲಪಾತಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ | ಅಭಿವೃದ್ಧಿ ಕಾಮಗಾರಿ ಪರಿಶೀಲನೆ

kalpa News

kalpa News

Next Post
ಜೋಗ ಜಲಪಾತಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ | ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಜೋಗ ಜಲಪಾತಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ | ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Leave a Reply Cancel reply

Your email address will not be published. Required fields are marked *

No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL