ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರತಿಯೊಬ್ಬ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ #Anganavadi Workers ಪ್ರತಿ ವರ್ಷ 2 ಸೀರೆಗಳನ್ನು ವಿತರಿಸಲಾಗುತ್ತದೆ. ಕರ್ನಾಟಕ ಕೈಮಗ್ಗ ನಿಗಮ ನಿಯಮಿತದಿಂದಲೇ ಖರೀದಿಸಬೇಕೆಂಬ ಷರತ್ತು ವಿಧಿಸಿ ಈ ಹಿಂದೆ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಕೇಂದ್ರ ಸರ್ಕಾರದ ಅನುದಾನ ಇರುವುದರಿಂದ ಇ-ಟೆಂಡರ್ ಅಥವಾ ಜೆಮ್ ಪೋರ್ಟಲ್ ಮುಖಾಂತರ ಖರೀದಿಸುವುದು ಸೂಕ್ತವಾಗಿದೆ ಎಂದು ಪರಿಗಣಿಸಿ ಟೆಂಡರ್ ಮುಖಾಂತರ ಖರೀದಿಸಲು ಸಚಿವ ಸಂಪುಟ ನಿರ್ಣಯಿಸಿದೆ.
69,919 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 1,37,509 ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿಯರಿಗೆ ಐ.ಸಿ.ಡಿ.ಎಸ್ ಯೋಜನೆಯ ನಿಯಮಾನುಸಾರ ತಲಾ ಎರಡು ಸೀರೆಗಳಂತೆ ಒಟ್ಟು 2,75,018 ಸೀರೆಗಳನ್ನು ಕಟಿಪಿಪಿ ಪೋರ್ಟಲ್ (ಇ-ಟೆಂಡರ್ / ಜೆಮ್ ಪೋರ್ಟಲ್ ಮುಖಾಂತರ ಖರೀದಿಸಲು 2024-25 ನೇ ಸಾಲಿನ ಅನುದಾನದಿಂದ ರೂ. 13.75 ಕೋಟಿಗಳ ವೆಚ್ಚವನ್ನು ಭರಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವರು ತಿಳಿಸಿದರು.
Also read: ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ
ಜಮೀನು ಹಂಚಿಕೆ
ಸಣ್ಣ ಕೈಗಾರಿಕೆಗಳ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ರಾಷ್ಟ್ರೀಯ ಸಣ್ಣ ಕೈಗಾರಿಕಾ ನಿಗಮ ಸಂಸ್ಥೆಗೆ ಹಂಚಿಕೆ ಮಾಡಲು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಪೀಣ್ಯ 1ನೇ ಹಂತದಲ್ಲಿರುವ ಕೈಗಾರಿಕಾ ವಸಾಹತುಗಳು ನಿವೇಶನ/ಮಳಿಗೆ ಸಂಖ್ಯೆ ಎ-180ನ್ನು 30 ವರ್ಷಗಳ ಕರಾರು ಅವಧಿಗೆ ವಾರ್ಷಿಕ ರೂ.1/- ಶುಲ್ಕದ ಆಧಾರದ ಮೇಲೆ ನೀಡಲು ತೀರ್ಮಾನಿಸಿದೆ.
ಕಾನೂನು ಆಯೋಗ
ರಾಜ್ಯ ಕಾನೂನು ಆಯೋಗದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಾನೂನು ಅಯೋಗದ ಹೊಸ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ ರವರು ವಿವರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post