ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಅ.11ರ ಶುಕ್ತವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಿಹೆಚ್‌ಇಎಲ್‌ನ ಬಾಪೂಜಿನಗರದ ನಿವಾಸಿ ತನ್ವೀರ್ ಪಾಷಾ ಎಂಬುವವರ ಪುತ್ರ ತಾಹೀರ್ ಪಾಷಾ (5) ಮೃತ ದುರ್ದೈವಿಯಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಮೃತ ಬಾಲಕ ಅಜ್ಜಿ ಮನೆಗೆ ಹೋಗಿದ್ದ. ಸ್ನೇಹಿತರೊಂದಿಗೆ ಆಟವಾಡಿದ ಬಳಿಕ ಸಂಜೆ ಮನೆಗೆ
ವಾಪಸ್ಸಾಗುತ್ತಿದ್ದ. ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್‌ನ ಹ್ಯಾಂಡಲ್ ಬಾರ್ ಭುಜಕ್ಕೆ ತಾಕಿದ್ದು, ಆಯತಪ್ಪಿ ರಸ್ತೆಗ ಬಿದ್ದಿದ್ದಾನೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಗೂಡ್ಸ್ ವಾಹನದ ಚಕ್ರಗಳು ಬಾಲಕನ ತಲೆ ಮೇಲೆ ಹರಿದಿದೆ ಎನ್ನಲಾಗಿದೆ.
Also read: ಡಾ. ಹೆಗಡೆವಾರ್ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಿ: ನವೀನ್ ಸುಬ್ರಹ್ಮಣ್ಯ ಕರೆ
ಗಾಯಗೊಂಡ ಬಾಲಕನನ್ನು ಕೂಡಲೇ ಸ್ಥಳೀಯರು ಹಾಗೂ ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಿಂದಪುರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ವಿಡೀಯೋ ಸಮೀಪದ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಚಾಲಕ ಪ್ರಶಾಂತ್ ನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post