ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ – 50ರಡಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಅಭಿಯಾನದ ಕನ್ನಡಜ್ಯೋತಿ ರಥವು ಮಂಗಳವಾರ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತಕ್ಕೆ ಆಗಮಿಸಿದ್ದು, ಅದನ್ನು ಸ್ವಾಗತಿಸಿ ಅವರು ಮಾತನಾಡಿದರು.

ಕನ್ನಡ ಒಂದು ಭಾಷೆಯಲ್ಲ, ಅದು ನಮ್ಮ ಬದುಕಾಗಿದೆ. ಕವಿಗಳು, ಸಾಹಿತಿಗಳ ಮೂಲಕ ಅಕ್ಷರ ರೂಪದಲ್ಲಿ ಕನ್ನಡ ಭಾಷೆ ಜೀವಂತವಾಗಿರಲು ಸಹಕಾರಿಯಾಗಿದೆ. ಪ್ರತಿಯೊಬ್ಬರು ಕನ್ನಡ ಸಾಹಿತ್ಯಗಳನ್ನು ಓದುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳಸಬೇಕಾಗಿದೆ. ಕನ್ನಡ ರಥ ಇಡೀ ರಾಜ್ಯಾದ್ಯಂತ ಸಂಚಾರ ನಡೆಸುತ್ತಿದ್ದು ಶಿವಮೊಗ್ಗ ನಗರಕ್ಕೆ ಆಗಮಿಸಿರುವ ರಥವನ್ನು ಅದ್ದೂರಿಯಾಗಿ ಸ್ವಾಗತಿಸಿ ಗೌರವಿಸಲಾಗಿದೆ ಎಂದರು.

ಕನ್ನಡಜ್ಯೋತಿ ರಥಯಾತ್ರೆ ಶಿವಪ್ಪ ನಾಯಕ ವೃತ್ತದಿಂದ ಗೋಪಿವೃತ್ತ ಮಾರ್ಗವಾಗಿ ಮಹಾವೀರ ವೃತ್ತ ಕುವೆಂಪು ರಂಗಮಂದಿರದವರೆಗೆ ಸಾಗಿ ಬಂದಿದ್ದು ಮಹಿಳಾ ಮತ್ತು ಪುರುಷ ಡೊಳ್ಳು ತಂಡ ಹಾಗೂ ಇತರ ಕಲಾಮೇಳದೊಂದಿಗೆ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ, ತಹಶೀಲ್ದಾರ್ ಗಿರೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಡಿ ಮಂಜುನಾಥ್, ರೋಟರಿ ಸಂಸ್ಥೆಯ ವಿಜಯಕುಮಾರ್, ವಿವಿಧ ಕನ್ನಡಪರ ಸಂಘಟನೆ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







Discussion about this post