ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿಹೋಗಿರುವ ರಾಜ್ಯ ರಾಜಧಾನಿ ಬೆಂಗಳೂರು ನಗರ, #Rain in Bangalore ಗ್ರಾಮಾಂತರ ಸೇರಿ ಐದು ಜಿಲ್ಲೆಗಳಲ್ಲಿ ಮುಂದಿನ ಅ.17ರಂದು ನಾಳೆ ಭಾರೀ ಮಳೆಯಾಗಲಿದೆ ಎಂದು ವರದಿಯಾಗಿದೆ.
ಈ ಕುರಿತಂತ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅ.17ರಂದು ಅತಿಯಾದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ #Orange alert ಘೋಷಣೆ ಮಾಡಲಾಗಿದೆ.
Also read: ಅ.17ರ ನಾಳೆ ಕಾವೇರಿ ತೀರ್ಥೋದ್ಭವ | ಎಷ್ಟೊತ್ತಿದೆ ಆಗಲಿದೆ? ಏನೆಲ್ಲಾ ಸಿದ್ದತೆ ಪೂರ್ಣಗೊಂಡಿದೆ? ಇಲ್ಲಿದೆ ವಿವರ
ಇನ್ನು, ಉಡುಪಿ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಅ.17-18ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ 2-3 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬಹಳಷ್ಟು ಕಡೆಗಳಲ್ಲಿ ಅವಾಂತರ ಸೃಷ್ಠಿಯಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ್ನಲ್ಲಂತೂ ವರುಣ ಅಕ್ಷರಶಃ ರುದ್ರನರ್ತನ ಮಾಡಿದ್ದು, ಮಳೆಯ ಅವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಪ್ರದೇಶದಲ್ಲಿ ಭೂಕುಸಿತವೂ ಸಹ ಸಂಭವಿಸಿದ್ದು, 4-5 ಅಡಿಗಳಷ್ಟು ನೀರು ರಸ್ತೆಯಲ್ಲಿ ಹರಿಯುತ್ತಿತ್ತು. ಪರಿಣಾಮವಾಗಿ ಜನರು ಬಹಳಷ್ಟು ತೊಂದರೆ ಅನುಭವಿಸಬೇಕಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post