ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವಾಗಿದ್ದು, ತೀರ್ಥೋದ್ಭವ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.
ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಬಳಿ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ಜರುಗಿತು.
Also read: ಉಡುಪಿ | ಗೀತಾ ಮಂದಿರದಲ್ಲಿ ಪ್ರಾಚ್ಯ ವಿದ್ಯಾ ಸಮ್ಮೇಳನ ಕಾರ್ಯಾಲಯ ಉದ್ಘಾಟನೆ
ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ. ಭಾಗಮಂಡಲ-ತಲಕಾವೇರಿಯಲ್ಲಿ ಒಂದು ತಿಂಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು, ತೀರ್ಥೋಧ್ಬವದ ಹಿನ್ನೆಲೆ ತಲಕಾವೇರಿ ಹಾಗೂ ಭಾಗಮಂಡಲಕ್ಕೆ ಸಾಗರೋಪಾದಿಯಲ್ಲಿ ಭಕ್ತಾಧಿಗಳು ಹರಿದು ಬರುತ್ತಿದ್ದಾರೆ.
ಲಕ್ಷಾಂತರ ಮಂದಿ ಭಕ್ತರು ಭೇಟಿ ನೀಡಲಿದ್ದು, ಭಾಗಮಂಡಲದಿಂದ ತಲಕಾವೇರಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಪಾದಯಾತ್ರೆಯಲ್ಲೂ ಸಾವಿರಾರು ಭಕ್ತರು ಬರುವುದರಿಂದ, ಭಾಗಮಂಡಲದಿಂದ ತಲಕಾವೇರಿಯವರೆಗೆ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ತೀರ್ಥವನ್ನು ಪ್ಲಾಸ್ಟಿಕ್ ಕೊಡ, ಕ್ಯಾನ್, ಬಾಟಲಿಗಳಲ್ಲಿ ಸಂಗ್ರಹಿಸುವುದನ್ನು ನಿಷೇಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post