ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಡಾ ನಿವೇಶನ ಹಂಚಿಕೆ ಪ್ರಕರಣದ ದಿಕ್ಕು ತಪ್ಪಿಸುವ ಹಿನ್ನೆಲೆಯಲ್ಲಿ ತಮ್ಮ ತಾಯಿ ಸಹಜ ಸಾವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವ ಆಕ್ಷೇಪಾರ್ಹ ಮತ್ತು ಖಂಡನೀಯ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಭೈರತಿ ಸುರೇಶ್ #Minister Byrathi Suresh ಅವರು ತಮ್ಮ ಪಕ್ಷದ ಭ್ರಷ್ಟ ನಾಯಕರನ್ನು ಉಳಿಸಿಕೊಳ್ಳಲು ಹಾಗೂ ಪ್ರಕರಣ ದಿಕ್ಕನ್ನು ಬೇರೆ ಕಡೆ ತಿರುಗಿಸಲು ತಮ್ಮ ತಾಯಿ ಸಹಜ ಸಾವನ್ನು ಗುರುಯಾಗಿಸಿಕೊಂಡು ಟೀಕೆ ಮಾಡುತ್ತಿದ್ದಾರೆ. ಆಚಾರವಿಲ್ಲದ ತಮ್ಮ ಎಲುಬಿಲ್ಲದ ನಾಲಿಗೆಯ ಮೂಲಕ ಕಾಂಗ್ರೆಸ್ ಪಕ್ಷದ ಮೂಲ ರಾಜಕೀಯ ಸಂಸ್ಕೃತಿಯಾದ ಲಜ್ಜೆಗೆಟ್ಟ ರಾಜಕಾರಣಕ್ಕೆ ಬಳಸಿಕೊಂಡಿರುವುದು ಆಕ್ಷೇಪಾರ್ಹ ಎಂದಿದ್ದಾರೆ.
Also read: ಪೋಷಕರ ಶ್ರಮ ಅರಿತು ಕಷ್ಟಪಟ್ಟು ಓದಿ ಸಮಾಜಕ್ಕೆ ಮಾದರಿ ವೈದ್ಯರಾಗಿ | ಡಾ. ನಾಗೇಂದ್ರ ಕರೆ

ಈ ರೀತಿಯ ನೀಚ ರಾಜಕಾರಣವನ್ನು ಯಾರು ಕೂಡ ಮಾಡಬಾರದು, ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು, ಅಳವಡಿಸಿಕೊಳ್ಳಬಾರದು. ಇದು ನಿಮಗೆ ಖಂಡಿತಾ ಶೋಭೆ ತರುವುದಿಲ್ಲ. ಇಂತಹ ಲಜ್ಜಾಸ್ಪದ ರಾಜಕೀಯದ ಮುಖವಾಡಗಳನ್ನು ನಾನು ಧಿಕ್ಕರಿಸುತ್ತೇನೆ. ಈ ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಆಗ್ರಹಿಸುತ್ತೇನೆ. ಇಲ್ಲವಾದಲ್ಲಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post