ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಇತ್ತೀಚೆಗೆ ಕರ್ನಾಟಕ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಡಿಜಿಟಲ್ ಬಂಧನದ ಸೈಬರ್ ಅಪರಾಧಗಳ #CyberCrime ಕುರಿತಾಗಿ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ #PMNarendraModi ಹೇಳಿದ್ದಾರೆ.
ಮನ್ ಕಿ ಬಾತ್’ನಲ್ಲಿ ಈ ಕುರಿತಂತೆ ಉಲ್ಲೇಖಿಸಿರುವ ಅವರು, ಇದು ಸಮಾಜದ ಎಲ್ಲಾ ವರ್ಗದವರನ್ನು ತಟ್ಟಿದ್ದು, ಇಂತಹ ಪರಿಸ್ಥಿತಿ ಎದುರಾದಾಗ ನಿಲ್ಲಿಸಿ, ಯೋಚಿಸಿ ಮತ್ತು ಕ್ರಮ ತೆಗೆದುಕೊಳ್ಳಿ ಎಂಬ ಮಂತ್ರವನ್ನು ಅಳವಡಿಸಿಕೊಳ್ಳುವಂತೆ ಜನರನ್ನು ಕೋರಿದ್ದಾರೆ.
ಸಮಸ್ಯೆಯನ್ನು ಎದುರಿಸಲು ತನಿಖಾ ಸಂಸ್ಥೆಗಳು ರಾಜ್ಯಗಳೊಂದಿಗೆ ಕೆಲಸ ಮಾಡುತ್ತಿವೆ. ಆದರೆ ಈ ಅಪರಾಧದಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವಲ್ಲಿ ಜಾಗೃತಿ ಅಗತ್ಯ ಎಂದು ಪ್ರಧಾನಿಯವರು ಹೇಳಿದ್ದಾರೆ.
ತಮ್ಮ ಸಂಭಾವ್ಯ ಬಲಿಪಶುಗಳ ಬಗ್ಗೆ ವಿವರವಾದ ಮಾಹಿತಿಯನ್ನು ಸಂಗ್ರಹಿಸಿದ ನಂತರ, ಜನರ ಭಯವನ್ನು ಅಸ್ತçವಾಗಿಸಿಕೊಂಡು ಅಂತಹ ಅಪರಾಧಿಗಳು ತನಿಖಾ ಸಂಸ್ಥೆ ಅಧಿಕಾರಿಗಳಂತೆ ಹೇಗೆ ಪೋಸ್ ನೀಡುತ್ತಾರೆ ಎಂಬುದನ್ನು ತೋರಿಸಲು ಪ್ರಧಾನಿ ಪ್ರತಿನಿಧಿ ವೀಡಿಯೊವನ್ನು ಪ್ರದರ್ಶಿಸಿದರು.
Also read: ಭದ್ರಾವತಿ | ಐತಿಹಾಸಿಕ ಪ್ರಸಿದ್ಧ ಲಕ್ಷ್ಮಿನರಸಿಂಹ ದೇಗುಲ ದುರಸ್ಥಿಗೆ ಒತ್ತಾಯ
ಡಿಜಿಟಲ್ ಅರೆಸ್ಟ್ ವಂಚನೆಗಳ ಬಗ್ಗೆ ಎಚ್ಚರದಿಂದಿರಿ. ಅಂತಹ ತನಿಖೆಗಾಗಿ ಯಾವುದೇ ತನಿಖಾ ಸಂಸ್ಥೆಯು ಫೋನ್ ಅಥವಾ ವೀಡಿಯೊ ಕರೆ ಮೂಲಕ ನಿಮ್ಮನ್ನು ಸಂಪರ್ಕಿಸುವುದಿಲ್ಲ ಎಂದವರು ಹೇಳಿದರು.
ರಾಷ್ಟ್ರೀಯ ಸೈಬರ್ ಸಹಾಯವಾಣಿಯೊಂದಿಗೆ ಸಂಪರ್ಕ ಸಾಧಿಸಲು ಅಥವಾ ಅದರ ಪೋರ್ಟಲ್‌ನೊಂದಿಗೆ ಸಂಪರ್ಕ ಸಾಧಿಸಲು 1930 ಅನ್ನು ಡಯಲ್ ಮಾಡಲು ಮತ್ತು ಅಂತಹ ಅಪರಾಧದ ಬಗ್ಗೆ ಪೊಲೀಸರಿಗೆ ತಿಳಿಸಲು ಪ್ರಧಾನಿಯವರು ಕೋರಿದ್ದಾರೆ.
ಈ ರೀತಿಯ ಬರುವ ಯಾವುದೇ ಕಾಲ್’ಗಳನ್ನು ಅವರು ಅಂತಹ ಸಂಭಾಷಣೆಗಳನ್ನು ರೆಕಾರ್ಡ್ ಮಾಡಬೇಕು. ಸ್ಕ್ರೀನ್ ಶಾಟ್’ಗಳನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post