ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೈತರ ಜಮೀನನ್ನು ಕಬಳಿಸಲು ಹೊರಟಿರುವ ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿಯಾಗಿದ್ದಾನೆ. ಅವರ ಮಾತಿಗೆ ಕಿಮ್ಮತ್ತು ನೀಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಕೂಡ ರಾಷ್ಟ್ರದ್ರೋಹಿಯೇ ಆಗುತ್ತಾರೆ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಇಂದು ವಕ್ಫ್ ಖಾತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರ ಭಕ್ತರ ಬಳಗದಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ವಕ್ಫ್ ಬೋರ್ಡ್ ನೀತಿಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ಅನ್ನ, ಗಾಳಿ ಸೇವಿಸುತ್ತಿರುವ ಜಮೀರ್ ಅಹಮ್ಮದ್ ಪಾಕಿಸ್ತಾನದಲ್ಲಿ ಇದ್ದವರಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನೇ ಇಸ್ಲಾಮಿಕ್ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನೂರಾರು ವರ್ಷಗಳಿಂದ ರೈತರು ಜಮೀನು ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಆದರೆ, ಜಮೀರ್ ಮಾತ್ರ ಇದು ವಕ್ಫ್ ಬೋರ್ಡ್ ಆಸ್ತಿ ಎಂದು ಕಾನೂನುಬಾಹಿರವಾಗಿ ರೈತರ ಜಮೀನಿನ ದಾಖಲೆಗಳನ್ನು ತಿದ್ದಿ ವಕ್ಫ್ ಬೋರ್ಡ್ ಹೆಸರಿಗೆ ವರ್ಗಾವಣೆ ಮಾಡಿಸುತ್ತಿದ್ದಾರೆ ಎಂದು ದೂರಿದರು.
ಶಿವಮೊಗ್ಗ: ಕರ್ನಾಟಕವನ್ನು ಮುಸ್ಲಿಂ ರಾಜ್ಯ ಮಾಡಲು ಕಾಂಗ್ರೆಸ್ ಸರ್ಕಾರ ಹೊರಟಿದ್ದು, ಹಿಂದೂ ವಿರೋಧಿ ಧೋರಣೆ ಅನುಸರಿಸಿ ಹಿಂದೂಗಳ ಆಸ್ತಿಯನ್ನು ವಕ್ಫ್ ಆಸ್ತಿ ಮಾಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ. ಈ ರಾಜ್ಯದಲ್ಲಿ ರಾಷ್ಟ್ರಭಕ್ತರು ಇನ್ನೂ ಸತ್ತಿಲ್ಲ. ಯಾವುದೇ ಕಾರಣಕ್ಕೂ ಹಿಂದೂಗಳ ಆಸ್ತಿ ಪರಭಾರೆ ಮಾಡಲು ಬಿಡುವುದಿಲ್ಲ. ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ. ಜಮೀರ್ ಅಹಮ್ಮದ್ ಅವರ ಮನೆಯ ಮುಂದೆಯೇ ಪ್ರತಿಭಟನೆ ನಡೆಸುತ್ತೇವೆ.
ಕೆ.ಎಸ್. ಈಶ್ವರಪ್ಪ
ಮುಖ್ಯಮಂತ್ರಿ ಸಿದ್ಧರಾಮಯ್ಯ ಏನೋ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಬಾಯಿ ಮಾತಿಗೆ ಹೇಳುತ್ತಾರೆ. ಆದರೆ ನಡೆದುಕೊಳ್ಳುವುದೇ ಬೇರೆ. ಮತ್ತೆ ಮತ್ತೆ ನೋಟಿಸ್ ಕೊಡಿಸುತ್ತಲೇ ಇದ್ದಾರೆ. ವಿರಕ್ತಮಠ ಸೇರಿದಂತೆ ಹಲವು ಮಠದ ಆಸ್ತಿಗಳು ಕೂಡ ವಕ್ಪ್ ಬೋರ್ಡ್ನದು ಎಂದು ಈಗಾಗಲೇ ನೋಟಿಸ್ ನೀಡುತ್ತಿದ್ದಾರೆ. ಒಂದು ಕಡೆ ರೈತರು ಮತ್ತೊಂದು ಕಡೆದ ಮಠದ ಆಸ್ತಿಗಳನ್ನು ಈ ರೀತಿ ಕಬಳಿಸುತ್ತಿರುವುದನ್ನು ನಾವು ವಿರೋಧಿಸುತ್ತೇವೆ ಎಂದರು.
Also read: Officials will be held accountable for missing commercial tax targets: CM Siddaramaiah

ಕೂಡಲೇ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ನೋಟಿಸ್ ಕೊಡುವುದನ್ನು ನಿಲ್ಲಿಸಬೇಕು. ಸಚಿವ ಜಮೀರ್ ಅಹಮ್ಮದ್ ಗೆ ಎಚ್ಚರಿಕೆ ನೀಡಿ ಈ ರೀತಿಯ ಅದಾಲತ್ ಮಾಡದಂತೆ ನಿರ್ಬಂಧಿಸಬೇಕು. ಅನ್ನದಾತರಿಗೆ ಅವರ ಜಮೀನನ್ನು ಬಿಟ್ಟುಕೊಡಬೇಕು. ರೈತರ ಜಮೀನು ಕಸಿದುಕೊಳ್ಳುತ್ತಿರುವ ಜಮೀರ್ ತಕ್ಷಣವೇ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಈ ರೀತಿಯ ನಿರ್ಧಾರ ಖಂಡಿಸಿ ರಾಷ್ಟ್ರಭಕ್ತರ ಬಳಗ ತನ್ನ ಹೋರಾಟ ತೀವ್ರಗೊಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post