ಕಲ್ಪ ಮೀಡಿಯಾ ಹೌಸ್ | ಚನ್ನಪಟ್ಟಣ |
ರಾಮನಗರ ಜಿಲ್ಲೆಯ ಚನ್ನಪಟ್ಟಣದ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರಾಗಿದ್ದ ಗೀತಾ ಶಿವರಾಂರವರು #Geetha Shivaram ಕಾಂಗ್ರೆಸ್ ತೊರೆದು ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಗೊಂಡರು.
ಚನ್ನಪಟ್ಟಣದಲ್ಲಿರುವ ಗೀತಾ ಶಿವರಾಂರವರ ನಿವಾಸಕ್ಕೆ ಗುರುವಾರ ಭೇಟಿ ನೀಡಿದ್ದ, ಎನ್‌ಡಿಎ ನಾಯಕರ ನಿಯೋಗ ಜೆಡಿಎಸ್, ಬಿಜೆಪಿ ಶಾಲು ಹೊದಿಸುವ ಮೂಲಕ ಗೀತಾರವರನ್ನು ಎನ್‌ಡಿಎ ಒಕ್ಕೂಟಕ್ಕೆ ಬರಮಾಡಿಕೊಂಡಿತು.
ಈ ವೇಳೆ ಮಾತನಾಡಿದ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್, ಗೀತಾ ಶಿವರಾಂರವರು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿರವರನ್ನು ಬೆಂಬಲಿಸುವ ಸಲುವಾಗಿ ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದಾರೆ. ಎನ್‌ಡಿಎ ಅಭ್ಯರ್ಥಿಯ ಪರವಾಗಿ ಅವರು ಕೆಲಸ ಮಾಡುತ್ತಾರೆ ಎಂದರು.
Also read: ಖ್ಯಾತ ಅರ್ಥಶಾಸ್ತ್ರಜ್ಞ, ಪ್ರಧಾನಿ ಮೋದಿ ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ಬಿಬೇಕ್ ವಿಧಿವಶ
ಎರಡು ಪಕ್ಷದ ಹಿರಿಯ ಮುಖಂಡರು ನನ್ನ ಮನೆಗೆ ಬಂದಿದ್ದಾರೆ. ಅವರ ಸಮ್ಮುಖದಲ್ಲಿ ನಾನು ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದೇನೆ. ಈ ಮುಂಚೆ ಕಾಂಗ್ರೆಸ್ ಪಕ್ಷಕ್ಕೆ ಹೇಗೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೆ. ಅದರಂತೆಯೇ ಇನ್ನೂಮುಂದೆ ಎನ್‌ಡಿಎ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತೇನೆ. ನಿಖಿಲ್ ಕುಮಾರಸ್ವಾಮಿರವರ ಪರವಾಗಿ ನನ್ನ ಎಲ್ಲಾ ಬೆಂಬಲವಿದೆ ಎಂದು ಗೀತಾ ಶಿವರಾಂರವರು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ ಸುರೇಶ್ ಬಾಬು, ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಟೆಗೌಡ, ರಮೇಶ್ ಗೌಡ, ಮಾಜಿ ಶಾಸಕರಾದ ಸುರೇಶಗೌಡ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post