ಕಲ್ಪ ಮೀಡಿಯಾ ಹೌಸ್ | ಸೊರಬ |
ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿ #Waqf Board ಮೂಲಕ ರೈತರ ಭೂಮಿ ವಶಪಡಿಸಿಕೊಳ್ಳಲು ಷಡ್ಯಂತ್ರ ರೂಪಿಸಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಆರೋಪಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಕ್ಫ್ ಮಂಡಳಿ ಲ್ಯಾಂಡ್ ಜಿಹಾದ್ ನಡೆಸುತ್ತಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ರೈತರ ಭೂಮಿಯ ಆರ್‍ಟಿಸಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ.

Also read: ಸೊರಬ | ಭೀಕರ ರಸ್ತೆ ಅಪಘಾತ | ಸವಾರ ಸ್ಥಳದಲ್ಲೇ ಸಾವು | ದುರಂತ ನಡೆದಿದ್ದು ಹೇಗೆ?
ಸಚಿವ ಜಮೀರ್ ಅಹಮ್ಮದ್ #Minister Zameer Ahmed ಅವರು ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ವಕ್ಫ್ ಅದಾಲತ್ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಮ್ಮಕ್ಕು ಇರುವುದು ಗೋಚರಿಸುತ್ತದೆ. ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಜನತೆಯ ನೆಮ್ಮದಿಯನ್ನು ಹದಗೆಡವಲು ಹವಣಿಸುತ್ತಿದೆ. ಅಭಿವೃದ್ಧಿ ವಿಷಯಗಳ ಬಗ್ಗೆ ಗಮನ ನೀಡದೇ, ರಾಜ್ಯದಲ್ಲಿನ ಮಠ, ಮಂದಿರಗಳು ಮತ್ತು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸುತ್ತಿದೆ. 1974ರಲ್ಲಿನ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು ಮತ್ತು ವಕ್ಫ್ ಮಂಡಳಿಗೆ ನೀಡಿರುವ ಅಪರಿಮಿತ ಅಧಿಕಾರವನ್ನು ರದ್ದು ಮಾಡಬೇಕು. ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ನೀಡಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದೇವೇಂದ್ರಪ್ಪ ಚನ್ನಾಪುರ ಉಪಸ್ಥಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post