No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ

kalpa News by kalpa News
November 4, 2024
in ಬೆಂಗಳೂರು ನಗರ
0
ಕೇಂದ್ರ ಸರ್ಕಾರದ ವಿರುದ್ಧ ಫೆ.7ರಂದು ಪ್ರತಿಭಟನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಹಾಕಿರುವ ಸವಾಲನ್ನು ಗಮನಿಸಿದ್ದು, ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ಸಿಎಂ ಸಿದ್ಧರಾಮಯ್ಯ ಬಹಿರಂಗ ಸವಾಲು ಹಾಕಿದ್ದಾರೆ.

ನಿಮ್ಮ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ. ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ. ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ ಎಂದು ಪಂಥಾಹ್ವಾನ ನೀಡಿದ್ದಾರೆ.
ನೀವು ಕಮಿಷನ್ ಹೊಡೆಯುವುದರಲ್ಲಷ್ಟೇ ಪರಿಣತರು ಎಂದು ನಿಮ್ಮದೇ ಪಕ್ಷದ ನಾಯಕರಾದ ಯತ್ನಾಳ್, ಜಾರಕಿಹೊಳಿ, ಹೆಚ್. ವಿಶ್ವನಾಥ್ ಅವರು ಹೇಳುತ್ತಲೇ ಇದ್ದಾರೆ. ಇಲ್ಲಿಯವರೆಗೆ ಅವರ ಆರೋಪಗಳಿಗೆ ನೀವು ಪ್ರತಿಕ್ರಿಯೆ ನೀಡದಿರುವುದು ಮತ್ತು ಇಂತಹ ಆರೋಪ ಮಾಡುತ್ತಿರುವವರ ವಿರುದ್ಧ ನಿಮ್ಮ ಪಕ್ಷದ ಹೈಕಮಾಂಡ್ ಕೂಡಾ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಈ ಆರೋಪಗಳನ್ನು ನೀವು ಒಪ್ಪಿಕೊಂಡಂತೆ ಕಾಣಿಸುತ್ತಿದೆ, ಇದು ನಿಜವೇ? ಎಂದು ಪ್ರಶ್ನಿಸಿದ್ದಾರೆ.

Also read: ಚಿಕ್ಕಬಳ್ಳಾಪುರ | ಹಳ್ಳಕ್ಕೆ ಬಿದ್ದ ಕಾರು ಬೆಂಕಿಗಾಹುತಿ | ಚಾಲಕ ಸಜೀವ ದಹನ

ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ನಿಮ್ಮ ಪದಚ್ಯುತಿಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿರುವ ಡಿಸೆಂಬರ್ ತಿಂಗಳ ಗಡುವು ನಿಜವಾಗುತ್ತಿರುವಂತೆ ಕಾಣುತ್ತಿದೆ. ನಮ್ಮ ಸರ್ಕಾರದ ಬಗ್ಗೆ ಚಿಂತಿಸುವ ಬದಲಿಗೆ ಮೊದಲು ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವ ಯೋಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ.

ನೀವಿನ್ನೂ ಆಡಳಿತಕ್ಕೆ ಹೊಸಬರು, ತೆರಿಗೆ – ಅನುದಾನ – ಜಿಎಸ್‌ಟಿ ಇತ್ಯಾದಿ ವಿಚಾರಗಳೆಲ್ಲ ನಿಮ್ಮ ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರಿಗೇ ಅರ್ಥವಾಗಿಲ್ಲ, ನಿಮಗೆಷ್ಟು ಅರ್ಥವಾಗಬಹುದು? ಕೇಂದ್ರದಲ್ಲಿ ಅಧಿಕಾರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇತ್ತೀಚೆಗಷ್ಟೇ 28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ತೆರಿಗೆ ಪಾಲನ್ನು ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ ಮಾತ್ರ ಎಂದು ಹರಿಹಾಯ್ದಿದ್ದಾರೆ.

ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಕರ್ನಾಟಕದ ಜನತೆ, ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಏಳು ಕೋಟಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತುವ ದಮ್-ತಾಖತ್ ನಿಮಗಾಗಲಿ ನಿಮ್ಮ ಹದಿನೇಳು ಎಂಪಿಗಳಿಗಾಗಲಿ ಎಲ್ಲಿದೆ?

ನಮ್ಮ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನಿಮ್ಮದೇ ಶಾಸಕರು ಹೇಗೆ ದುರ್ಯೋಧನ – ದುಶ್ಯಾಸನರ ರೀತಿಯಲ್ಲಿ ನಡೆದುಕೊಂಡಿದ್ದರು ಎನ್ನುವ ಇತಿಹಾಸವನ್ನು ನಾನು ಕೆದಕಲು ಹೋಗುವುದಿಲ್ಲ. ಆದರೆ ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ಪೂಜ್ಯ ತಂದೆಯವರನ್ನು ಮನೆಯಲ್ಲಿಟ್ಟುಕೊಂಡು ನಮಗೆ ಹೆಣ್ಣುಮಕ್ಕಳ ರಕ್ಷಣೆಯ ಪಾಠ ಮಾಡಲು ಕನಿಷ್ಠ ನಿಮಗೆ ನಾಚಿಕೆ ಆಗುವುದಿಲ್ಲವೇ?

‘‘ಬೇಟಿ ಬಚಾವೋ ಬೇಟಿ ಪಡಾವೋ’’ ಎಂದು ಆಗಾಗ ಘೋಷಣೆ ಕೂಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆಗೆ ಬದ್ಧರಾಗಿದ್ದರೆ ಪೋಕ್ಸೋ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ ಸ್ಥಾನದಿಂದ ಮತ್ತು ಅವರನ್ನು ರಕ್ಷಿಸುತ್ತಿರುವ ನಿಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಬೇಕು.

ನನ್ನ ವಿರುದ್ದ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೆ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಪೀಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್ ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ.

ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು ಅದಕ್ಕೆ ಸಿದ್ಧರಾಗಿರಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: B Y VijayendraBangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPM Narendra Modiಪ್ರಧಾನಿ ನರೇಂದ್ರ ಮೋದಿಬಿ.ವೈ. ವಿಜಯೇಂದ್ರಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿಕ್ಕಬಳ್ಳಾಪುರ | ಹಳ್ಳಕ್ಕೆ ಬಿದ್ದ ಕಾರು ಬೆಂಕಿಗಾಹುತಿ | ಚಾಲಕ ಸಜೀವ ದಹನ

Next Post

ರಾಜ್ಯದಲ್ಲಿ ವಕ್ಸ್ ಕಾಯ್ದೆ ದುರ್ಬಳಕೆ ಖಂಡನೀಯ: ರುದ್ರೇಗೌಡ ಆರೋಪ

kalpa News

kalpa News

Next Post
ರಾಜ್ಯದಲ್ಲಿ ವಕ್ಸ್ ಕಾಯ್ದೆ ದುರ್ಬಳಕೆ ಖಂಡನೀಯ: ರುದ್ರೇಗೌಡ ಆರೋಪ

ರಾಜ್ಯದಲ್ಲಿ ವಕ್ಸ್ ಕಾಯ್ದೆ ದುರ್ಬಳಕೆ ಖಂಡನೀಯ: ರುದ್ರೇಗೌಡ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL