ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ ಪ್ರತಿಷ್ಠಿತ ಸುಬ್ಬಯ್ಯ ಟ್ರಸ್ಟ್ ಹಾಗೂ ಮ್ಯಾಕ್ಸ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಟಿ. ಸುಬ್ಬರಾಮಯ್ಯ (87) ಇಂದು ಮುಂಜಾನೆ ವಿಧಿವಶರಾಗಿದ್ದಾರೆ.
ವಯೋಸಹಜ ಅಸ್ವಸ್ಥತೆಯಿಂದ ಕೆಲವು ದಿನಗಳಿಂದ ಬಳಲುತ್ತಿದ್ದ ಅವರು, ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಸುಬ್ಬಯ್ಯ ಸಮೂಹ ಸಂಸ್ಥೆಗಳ ನಿರ್ಮಾತೃವಾಗಿ ಶಿವಮೊಗ್ಗ ಮಾತ್ರವಲ್ಲದೆ ರಾಜ್ಯ ಹಾಗೂ ದೇಶದ ವೈದ್ಯಕೀಯ ಕ್ಷೇತ್ರಕ್ಕೆ ಇವರ ಕೊಡುಗೆ ಅಪಾರವಾಗಿದೆ.
ವೈದ್ಯಕೀಯ ಶಿಕ್ಷಣ ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಗಣನೀಯ ಸೇವೆ ಸಲ್ಲಿಸಿರುವ ಇವರ ನಿಧನ ತುಂಬಲಾರದ ನಷ್ಟವಾಗಿದೆ.
ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಸಂಸ್ಥೆಯ ಆಡಳಿತ ಮಂಡಳಿ, ವೈದ್ಯರು ಹಾಗೂ ಸಿಬ್ಬಂದಿ ವರ್ಗ ಕಂಬನಿ ಮಿಡಿದಿದೆ.
ಸುಬ್ಬರಾಮಯ್ಯ ಅವರ ನಿಧನಕ್ಕೆ ಕಲ್ಪ ಮೀಡಿಯಾ ಹೌಸ್ ಸಂತಾಪ ಕೋರುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
















