ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿರಿಯ ಐಪಿಎಸ್ ಅಧಿಕಾರಿಯೊಬ್ಬರಿಗೆ ಬೆದರಿಕೆ ಹಾಗೂ ಸುಳ್ಳು ಆರೋಪಿ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ #HDKumaraswamy ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿ ಮೂವರ ವಿರುದ್ಧ ಎಫ್’ಐಆರ್ #FIR ದಾಖಲಾಗಿದೆ.
ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದಲ್ಲಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ #NikhilKumaraswamy ಹಾಗೂ ಅವರ ಸಹಾಯಕ ಸುರೇಶ್ ಬಾಬು ವಿರುದ್ಧ ಸಂಜಯನಗರ ಠಾಣೆಯಲ್ಲಿ ಎಫ್’ಐಆರ್ ದಾಖಲಿಸಲಾಗಿದೆ.
ಯಾವೆಲ್ಲಾ ಸೆಕ್ಷನ್ ಅಡಿ ದಾಖಲು?
ಬಿಎನ್’ಎಸ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದಲ್ಲಿ ಎಚ್.ಡಿ. ಕುಮಾರಸ್ವಾಮಿ ಆರೋಪಿ ನಂಬರ್ 1 ಆಗಿದ್ದಾರೆ. ಅಂತೆಯೇ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ನಂಬರ್ 2 ಮತ್ತು ಜೆಡಿಎಸ್ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್ 3 ಆಗಿದ್ದಾರೆ ಎಂದು ಹೇಳಲಾಗಿದೆ.
Also read: ಗಮನಿಸಿ! ನ.6ರಂದು ಕುಂಸಿ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರುವುದಿಲ್ಲ
ದೂರಿನಲ್ಲಿರುವಂತೆ ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದು, ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನು, ತಮ್ಮ ವಿರುದ್ದದ ದೂರಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಎಚ್.ಡಿ. ಕುಮಾರಸ್ವಾಮಿ, ನನ್ನ ವಿರುದ್ಧದ ದೂರು ದ್ವೇಷಪೂರತವಾದದ್ದು. ರಾಜ್ಯ ಕಾಂಗ್ರೆಸ್ ಸರ್ಕಾರದ ದ್ವೇಷದ ಸಾಧನೆಗೆ ಕೋರ್ಟ್ ಮೂಲಕವೇ ಉತ್ತರ ನೀಡುತ್ತೇನೆ ಎಂದಿದ್ದಾರೆ.
ಎಫ್ಐಆರ್ ಪ್ರತಿ ಓದಿದ ಮೇಲೆ ಅದು ದ್ವೇಷಪೂರಿತ ಎಂದು ತಿಳಿಯಿತು. ನಾನು ಸುದ್ದಿಗೋಷ್ಠಿ ಮಾಡಿದೆ ಎಂದು, ನಿಖಿಲ್ ಅದಕ್ಕೆ ಪೂರಕ ಹೇಳಿಕೆ ನೀಡದ ಅಂತ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ ಬಾಬು ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಕ್ಕಾಗಿ ಎಫ್ಐಆರ್ ಮಾಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಇವರ ಷಡ್ಯಂತ್ರ ನಡೆಯಲ್ಲೆಂದು ತಿಳಿದು ಕುತಂತ್ರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post