ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಮುಂಬೈ |
ತನ್ನ ಪ್ರಯಾಣಿಕರಿಗೆ ಇನ್ಮುಂದೆ ಹಲಾಲ್ #Halal ಪ್ರಮಾಣೀಕೃತ ಆಹಾರವನ್ನು ಸರಬರಾಜು ಮಾಡುವುದಿಲ್ಲ ಎಂದು ಏರ್ ಇಂಡಿಯಾ #Air India ವಿಮಾನಯಾನ ಸಂಸ್ಥೆ ಸ್ಪಷ್ಟಪಡಿಸಿದೆ.
ಈ ಕುರಿತಂತೆ ಏರ್ ಇಂಡಿಯಾ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಇನ್ನು ಮುಂದೆ ಏರ್ ಇಂಡಿಯಾದಲ್ಲಿ ಹಿಂದೂ ಮತ್ತು ಸಿಖ್ ಸಮುದಾಯದ ಪ್ರಯಾಣಿಕರಿಗೆ ಹಲಾಲ್ ಪ್ರಮಾಣೀಕೃತ ಆಹಾರವನ್ನು ವಿತರಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
2024ರ ಇದೇ ವರ್ಷದ ಜೂನ್ 17ರಂದು ವಿರುದುನಗರದ ಕಾಂಗ್ರೆಸ್ ಸಂಸದ ಮಣಿಕಂ ಟ್ಯಾಗೋರ್ ಅವರ್ ವಿಷಯ ಪ್ರಸ್ತಾಪಿಸಿ, ಏರ್ ಇಂಡಿಯಾದಲ್ಲಿ ಧರ್ಮದ ಆಧಾರದ ಮೇಲೆ ಊಟ ಲೇಬಲ್ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಅಲ್ಲದೇ, ಹಿಂದೂ ಅಥವಾ ಮುಸ್ಲಿಂ ಊಟ ಎಂದರೇನು ಎಂದು ಖಾರವಾಗಿ ಪ್ರಶ್ನಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಅವರು ಸಂಘಿಗಳು ಏರ್ ಇಂಡಿಯಾವನ್ನು ವಶಪಡಿಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದ್ದರು. ಅಲ್ಲದೇ, ನಾಗರಿಕ ವಿಮಾನಯಾನ ಸಚಿವಾಲಯ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ಹಲಾಲ್ ಊಟವನ್ನು ರದ್ದು ಮಾಡುವ ನಿರ್ಧಾರವನ್ನು ಏರ್ ಇಂಡಿಯಾ ಕೈಗೊಂಡಿದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post