No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಿಮಗೆ ನಾಚಿಕೆ ಆಗಲ್ವ? ಮೈಸೂರಿನ ಎಲ್ಲಾ ತಹಶೀಲ್ದಾರರಿಗೂ ಸಚಿವ ಕೃಷ್ಣ ಬೈರೇಗೌಡ ಛೀಮಾರಿ

ಬಗರ್ ಹುಕುಂ ಅರ್ಜಿ ವಿಲೇಗೆ ಈ ತಿಂಗಳ 25 ರ ಗಡುವು: ಉತ್ತಮ ಕೆಲಸ ಮಾಡುವವ ಅಧಿಕಾರಿಗಳಿಗೆ ಸನ್ಮಾನದ ಭರವಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 15, 2024
in ಬೆಂಗಳೂರು ನಗರ
0
ನಿಮಗೆ ನಾಚಿಕೆ ಆಗಲ್ವ? ಮೈಸೂರಿನ ಎಲ್ಲಾ ತಹಶೀಲ್ದಾರರಿಗೂ ಸಚಿವ ಕೃಷ್ಣ ಬೈರೇಗೌಡ ಛೀಮಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಡವರಿಗೆ ಭೂ ಮಂಜೂರುಗೊಳಿಸುವ “ಬಗರ್ ಹುಕುಂ” ಅರ್ಜಿಗಳ ಪೈಕಿ ಅರ್ಹ-ಅನರ್ಹ ಅರ್ಜಿಗಳನ್ನು ರಾಜ್ಯದ ಎಲ್ಲಾ ತಹಶೀಲ್ದಾರರೂ ಈ ತಿಂಗಳ 25 ರ ಒಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತಪ್ಪಿದರೆ ಎಲ್ಲರಿಗೂ ಶೋಕಾಸ್ ನೊಟೀಸ್ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ #Minister KrishnaByregowda ಅವರು ಅಧಿಕಾರಿಗಳನ್ನು ಎಚ್ಚರಿಸಿದರು.

ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ವಿಕಾಸಸೌಧದಿಂದ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ ಅರ್ಜಿ ವಿಲೇ ಪ್ರಗತಿ ಪರಿಶೀಲನೆ ನಡೆಸಿದರು.
“ಬಗರ್ ಹುಕುಂ” ಬಡವರ ಕೆಲಸ. ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು ದಶಕಗಳಿಂದ ಹೋರಾಡುತ್ತಿವೆ. ಈ ಬಗ್ಗೆ ಸರ್ಕಾರಕ್ಕೂ ಬದ್ಧತೆ ಇದ್ದು, ರೈತ ಹೋರಾಟಗಾರರ ದ್ವನಿಗೆ ಕಿವಿಗೊಡುವ ಅವರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಉತ್ತರದಾಯಿತ್ವ ನನ್ನ ಮೇಲೂ ಇದೆ” ಎಂದರು.

ಮುಂದುವರೆದು, “ಬಗರ್ ಹುಕುಂ ಕೆಲಸಗಳಿಗೆ ಚುರುಕು ಮುಟ್ಟಿಸಬೇಕು ಎಂಬ ಕಾರಣದಿಂದಲೇ ನಾನು ಕಳೆದ ಒಂದು ವರ್ಷದಿಂದ ವ್ಯಯಕ್ತಿಕವಾಗಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದೇನೆ. ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಪ್ರತಿ ತಿಂಗಳೂ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಸಭೆ ನಡೆಸಿ ಪ್ರಗತಿ ಪರಿಶೀಲಿಸುತ್ತಿದ್ದೇನೆ. ಆದರೂ ಕೆಲವು ತಹಶೀಲ್ದಾರರು ಬಡವರ ಕೆಲಸದ ಬಗ್ಗೆ ಅಸಡ್ಡೆ ಧೋರಣೆ ತೋರುತ್ತಿರುವುದು ವಿಷಾದನೀಯ” ಎಂದು ತೀವ್ರ ಅಸಾಮಾಧನ ಹೊರಹಾಕಿದರು.

“ಬಡವರ ಕೆಲಸದ ಬಗ್ಗೆ ಅಧಿಕಾರಿ ವರ್ಗದಿಂದ ಈ ಮಟ್ಟದ ಅಸಡ್ಡೆಯನ್ನು ನಾನು ನಿರೀಕ್ಷಿಸಿರಲಿಲ್ಲ. ರಾಜ್ಯದ ಒಟ್ಟಾರೆ 14 ಲಕ್ಷ ರೈತರು ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳ ಪೈಕಿ ಅರ್ಹ ಅರ್ಜಿ ಯಾವುದು? ಅನರ್ಹ ಅರ್ಜಿ ಯಾವುದು? ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಒಂದೂವರೆ ವರ್ಷ ಬೇಕಾ?” ಎಂದು ಸಚಿವರು ಕಿಡಿಕಾರಿದರು.

ಮುಂದುವರೆದು, “ಇದೇ ತಿಂಗಳ 25 ರ ಒಳಗೆ ತಹಶೀಲ್ದಾರರು ಅರ್ಹ-ಅನರ್ಹ ಅರ್ಜಿಗಳನ್ನು ವಿಂಗಡಿಸಿ ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳು 26 ರ ಬೆಳಗ್ಗೆಯೇ ಇಡೀ ಜಿಲ್ಲೆಯ ಪಟ್ಟಿಯನ್ನು ಒಂದುಗೂಡಿಸಿ ನನಗೆ ಸಲ್ಲಿಸಬೇಕು. ಹಾಗೂ ಡಿಸೆಂಬರ್ ಮೊದಲ ವಾರದಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಡಿಜಿಟಲ್ ಭೂ ಸಾಗುವಳಿ ಚೀಟಿ ನೀಡಬೇಕು” ಎಂದು ಅವರು ತಾಕೀತು ಮಾಡಿದರು.
ಅರ್ಹ-ಅನರ್ಹ ವಿಂಗಡನೆಯ ಮಾನದಂಡವೇನು?

ರಾಜ್ಯಾದ್ಯಂತ ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ 14ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಅನರ್ಹ ಅರ್ಜಿಗಳ ಸಂಖ್ಯೆಯೇ ಅಧಿಕವಾಗಿದೆ. ಹೀಗಾಗಿ ಅರ್ಜಿಗಳನ್ನು ಅನರ್ಹ ಎಂದು ನಿರ್ಧರಿಸಲು ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿದಾರರು ನಿರ್ದಿಷ್ಟ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿಲ್ಲ, ನಿರ್ದಿಷ್ಟ ಪ್ರದೇಶದಲ್ಲಿ ಗೋಮಾಳ ಭೂಮಿ ಅಧಿಕ ಇಲ್ಲ, ಅರಣ್ಯ ಭೂಮಿಯನ್ನು ಕೋರಿ ಸಾಗುವಳಿಗೆ ಅರ್ಜಿ ಸಲ್ಲಿಸಿದ್ದರೆ, ಅರ್ಜಿದಾರರ ಹೆಸರಿನಲ್ಲಿ ಈಗಾಗಲೇ 4.38 ಎಕರೆಗೂ ಅಧಿಕ ಜಮೀನು ಇದ್ದರೆ, ಅರ್ಜಿದಾರರು ಭೂಮಿ ಕೋರಿ ಅರ್ಜಿ ಸಲ್ಲಿಸಿರುವ ಪ್ರದೇಶದಲ್ಲಿ ವಾಸ ಇಲ್ಲದಿದ್ದರೆ, ಅರ್ಜಿಯೇ ನಕಲು ಆಗಿದ್ದರೆ ಅಥವಾ ಅರ್ಜಿದಾರರು ಅಧಿಕಾರಿಗಳ ಕೈಗೆ ಸಿಗದಿದ್ದರೆ ಅಂತಹ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗುವುದು. ಇದರ ಹೊರತಾಗಿ ಬೇರೆ ಸ್ವರೂಪದ ಸಮಸ್ಯೆಗಳು ಕಂಡುಬಂದರೆ ಅದನ್ನೂ ಸಹ ಪಟ್ಟಿಮಾಡಿ ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ತಹಶೀಲ್ದಾರರಿಗೆ ಸೂಚಿಸಿದರು.

ಮಾಲೂರು ತಹಶೀಲ್ದಾರರಿಗೆ ನೊಟೀಸ್:

ಬಗರ್ ಹುಕುಂ ಅರ್ಜಿ ವಿಲೇ ಕೆಲಸದಲ್ಲಿ ಅಸಡ್ಡೆ ತೋರಿದ ಮಾಲೂರು ತಾಲೂಕು ತಹಶೀಲ್ದಾರ್ ರಮೇಶ್ ಅವರಿಗೆ ಶೋಕಾಸ್ ನೊಟೀಸ್ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಇಂದಿನ ಸಭೆಯಲ್ಲಿ ಸೂಚಿಸಿದರು.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ 10,771 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಈವರೆಗೆ ಸ್ಥಳ ಪರಿಶೀಲನೆಗೊಂಡಿರುವ ಅರ್ಜಿಗಳ ಸಂಖ್ಯೆ ಕೇವಲ 55 ಮಾತ್ರ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಸಭೆ ಆರಂಭವಾಗುತ್ತಿದ್ದಂತೆ ಸಚಿವ ಕೃಷ್ಣ ಬೈರೇಗೌಡ ಅವರು ಮಾಲೂರು ತಹಶೀಲ್ದಾರ್ ರಮೇಶ್ ಅವರ ಬಳಿ ಮಾತನಾಡಲು ಯತ್ನಿಸಿದರು. ಆದರೆ, ಅವರು ಸಭೆಗೆ ಒಂದು ಗಂಟೆ ತಡವಾಗಿ ಬಂದರು. ಅಲ್ಲದೆ, ಸಚಿವರ ಪ್ರಶ್ನೆಗಳಿಗೆ ಉತ್ತರಿಸಲೂ ತಡವರಿಸಿದರು. ಹೀಗಾಗಿ ಅವರಿಗೆ ಕೂಡಲೇ ಶೋಕಾಸ್ ನೊಟೀಸ್ ನೀಡುವಂತೆ ಸಚಿವರು ಸೂಚಿಸಿದರು.

ಉತ್ತಮ ಕೆಲಸ ಮಾಡುವವರಿಗೆ ಸನ್ಮಾನದ ಭರವಸೆ:

ಬಗರ್ ಹುಕುಂ ಬಡವರ ಕೆಲಸವಾಗಿದ್ದು, ಅತ್ಯುತ್ತಮವಾಗಿ ಕೆಲಸ ನಿರ್ವಹಿಸುವ ತಹಶೀಲ್ದಾರರುಗಳಿಗೆ ಪ್ರಶಂಸನೀಯ ಪತ್ರ ನೀಡಿ ಸನ್ಮಾನಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

ಇಂದಿನ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಹಶೀಲ್ದಾರ್ ಶ್ರೀಧರ್ ಶೇಖರ್ ಮುಂದಲಮನಿ ಹಾಗೂ ಮುಂಡಗೋಡು ತಾಲೂಕು ತಹಶೀಲ್ದಾರ್ ಮುಂಡಗೋಡು ಶಂಕರ್ ಗೌಡಿ ಅವರ ಪ್ರಶಂಸಿಸಿದ ಸಚಿವರು, “ಹಲವರು ಕೆಲಸ ಮಾಡಿ ಅಂದ್ರೆ ಬಗರ್ ಹುಕುಂ ಆ್ಯಪ್ ಸಹಕರಿಸುತ್ತಿಲ್ಲ, ನೆಟ್ವರ್ಕ್ ಇಲ್ಲ ಎಂದು ಇಲ್ಲ ಸಲ್ಲದ ಕಾರಣ ನೀಡುತ್ತಾರೆ. ಆದರೆ, ನೆಟ್ವರ್ಕೆ ಇಲ್ಲ ಗುಡ್ಡಗಾಡು ಅರಣ್ಯ ಪ್ರದೇಶದಲ್ಲಿ ಅಧಿಕಾರಿಗಳು ಹೇಗೆ ಶೇ.80ರಷ್ಟು ಬಗರ್ ಹುಕುಂ ಅರ್ಜಿ ವಿಲೇ ಮಾಡಲು ಸಾಧ್ಯವಾಯಿತು?
ಇಲ್ಲಿ ಸಾಧ್ಯವಾಗುವುದಾದರೆ ಬೇರೆ ತಾಲೂಕುಗಳಲ್ಲೂ ಏಕೆ ಸಾಧ್ಯವಿಲ್ಲ? ಎಂದು ಪ್ರಶ್ನೆ ಮಾಡಿದ ಸಚಿವರು ಬಗರ್ ಹುಕುಂ ವಿಚಾರದಲ್ಲಿ ಉತ್ತಮ ಸೇವೆ ಸಲ್ಲಿಸುವ ಕಾಲಮಿತಿಯೊಳಗೆ ಅರ್ಜಿ ವಿಲೇಗೊಳಿಸುವ ಅಧಿಕಾರಿಗಳನ್ನು ಬೆಂಗಳೂರಿಗೆ ಖುದ್ದಾಗಿ ಕರೆದು ಮುಂದಿನ ತಿಂಗಳ ಸಭೆಯಲ್ಲಿ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಗುವುದು” ಎಂದು ಭರವಸೆ ನೀಡಿದರು.

ಮೈಸೂರಿನ ಅಧಿಕಾರಿಗಳೇ ನಿಮಗೆ ನಾಚಿಕೆ ಆಗಲ್ವ?

ಕೆಲಸ ಮಾಡದ ಮೈಸೂರಿನ ತಹಶೀಲ್ದಾರರೇ ನಿಮಗೆ ನಾಚಿಕೆ ಆಗಲ್ವ? ನಿಮಗೆ ಮನುಷ್ಯತ್ವ ಇಲ್ವ? ಎಂದು ಅಧಿಕಾರಿಗಳನ್ನು ಇಂದಿನ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬಗರ್ ಹುಕುಂ ಅರ್ಜಿ ವಿಲೇ, ನಮೂನೆ 1-5 ಹಾಗೂ ನಮೂನೆ 6-10 ದುರಸ್ಥಿ ಕೆಲಸ ಹಾಗೂ ತಹಶೀಲ್ದಾರ್ ತಕರಾರು ಅರ್ಜಿ ವಿಲೇ ಕೆಲಸದಲ್ಲೂ ಮೈಸೂರು ಸಾಕಷ್ಟು ಹಿಂದೆ ಬಿದ್ದಿದೆ. ಹೀಗಾಗಿ ಮೈಸೂರು ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರ್ ಗಳನ್ನೂ ತರಾಟೆಗೆ ತೆಗೆದುಕೊಂಡ ಸಚಿವರು, “ಮೈಸೂರು ಜಿಲ್ಲೆ ಕಳಪೆಯಲ್ಲಿ ಕಳಪೆ ಜಿಲ್ಲೆಯಾಗುತ್ತಿದೆ. ಕೆಲಸ ಮಾಡದ ಅಧಿಕಾರಿಗಳಿಗೆ ಮನುಷ್ಯತ್ವ ಇದೆಯಾ? ನಿಮಗೆ ಯಾವ ಭಾಷೆಯಲ್ಲಿ ಹೇಳಬೇಕು, ನಾಚಿಕೆ ಆಗಲ್ವ? ಎಂದು ಕಿಡಿಕಾರಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್, ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister KrishnaByregowdaNews_in_KannadaNews_Kannadaಬೆಂಗಳೂರುಸಚಿವ ಕೃಷ್ಣ ಬೈರೇಗೌಡ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದುಡ್ಡೇ ದೊಡ್ಡಪ್ಪ

Next Post

ಫಿನೋ ಬ್ಯಾಂಕ್ ನೂತನ ಪ್ರಯತ್ನ | “ಗುಲ್ಲಕ್” ಖಾತೆ ಪ್ರಾರಂಭ | ಇದರ ಪ್ರಯೋಜನ, ಉದ್ದೇಶವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫಿನೋ ಬ್ಯಾಂಕ್ ನೂತನ ಪ್ರಯತ್ನ | “ಗುಲ್ಲಕ್” ಖಾತೆ ಪ್ರಾರಂಭ | ಇದರ ಪ್ರಯೋಜನ, ಉದ್ದೇಶವೇನು?

ಫಿನೋ ಬ್ಯಾಂಕ್ ನೂತನ ಪ್ರಯತ್ನ | "ಗುಲ್ಲಕ್" ಖಾತೆ ಪ್ರಾರಂಭ | ಇದರ ಪ್ರಯೋಜನ, ಉದ್ದೇಶವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL