ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಂದೂಗಳ ಪ್ರಸಿದ್ಧ ಯಾತ್ರಾ ಸ್ಥಳ ವೈಷ್ಣೋದೇವಿಗೆ #Vishnodevi ತೆರಳುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸಹಾಯಧನ ನೀಡುವುದಾಗಿ ಘೋಷಿಸಿದೆ.
ರಾಜ್ಯದಿಂದ ಜಮ್ಮು ಕಾಶ್ಮೀರದ ಮಾತಾ ವೈಷ್ಣೋದೇವಿ ಯಾತ್ರೆಗೆ ತೆರಳುವ ಭಕ್ತರಿಗೆ 5,000 ರೂ. ಪ್ರೋತ್ಸಾಹ ಧನ ನೀಡಲು ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.
ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ, ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತಾಗಿ 5,000 ರೂ. ಸಹಾಯಧನ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
Also read: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್ | ಕಾರಣವೇನು?
10 ಕೋಟಿ ರೂಪಾಯಿ ವೆಚ್ಚದಲ್ಲಿ ಎಂಎಸ್ ಬಿಲ್ಡಿಂಗ್ ಎದುರು ಮುಜರಾಯಿ ಇಲಾಖೆಗೆ ಸೇರಿದ ಜಾಗದಲ್ಲಿ ಧಾರ್ಮಿಕ ಸೌಧ ಭವನ ನಿರ್ಮಾಣ ಮಾಡಲು ಸಭೆ ತೀರ್ಮಾನ ಕೈಗೊಂಡಿದೆ.
ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜು ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಸಭೆ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post