ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಸೇರಿದಂತೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ #Heavy Rain ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದ್ದು, ಉಪ್ಪಿನಂಗಡಿ, ಶ್ರವಣಬೆಳಗೊಳ, ಹೊಸಕೋಟೆ, ಅರಕಲಗೂಡು, ಚಿಂತಾಮಣಿ, ನಾಗಮಂಗಲ, ಚಾಮರಾಜನಗರ, ಕೋಲಾರದಲ್ಲೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Also read: ಇತಿಹಾಸದ ಚರ್ಚೆ ಅವಶ್ಯಕತೆ ಇದ್ದರೆ, ವೇದಿಕೆ ಸಿದ್ದಪಡಿಸಲಿ
ಕಳೆದೆರಡು ದಿನಗಳಿಂದ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಶನಿವಾರ ಹಲವೆಡೆ ಮಳೆಯಾಗಿತ್ತು. ಇನ್ನು ಮುಂದಿನ 2 ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದ್ದು, ನವೆಂಬರ್ 20ರ ಬಳಿಕ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ.ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದ್ದು, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post