ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಪ್ರಜ್ಞಾಹೀನ ಸ್ಥಿತಿಯಲ್ಲಿ ನದಿಯಲ್ಲಿ ತೇಲುತ್ತಿದ್ದ ವ್ಯಕ್ತಿಯನ್ನು ಇಬ್ಬರು ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕರ ಸಹಾಯದಿಂದ ರಕ್ಷಿಸಿರುವ ಘಟನೆ ಸಂಕದಹೊಳೆ ಗ್ರಾಮದ ಬಳಿಯಲ್ಲಿ ನಡೆದಿದೆ.
ಬೆಳಗ್ಗೆ ವೇಳೆಗೆ ಇಆರ್’ಎಸ್’ಎಸ್-112 ಸಹಾಯವಾಣಿಗೆ ಕರೆಯೊಂದು ಬಂದಿದೆ. ನೀರಿನಲ್ಲಿ ಮೃತದೇಹವೊಂದು ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Also read: ಡಿ.9-20: ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನ
ಈ ವೇಳೆ ನದಿಗಿಳಿದ ಸಿಬ್ಬಂದಿ ನದಿಯಲ್ಲಿ ತೇಲುತ್ತಿದ್ದ ವ್ಯಕ್ತಿಯನ್ನು ಪರೀಕ್ಷಿಸಿದ್ದು, ಈ ವೇಳೆ ಆತ ಬದುಕಿದ್ದು, ಎಚ್ಚರ ತಪ್ಪಿದ್ದಾನೆ ಎಂದು ತಿಳಿದಿದೆ.

ಬಳಿಕ ಆತನಿಗೆ ಘಟನಾ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.
ಸಮಯ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಿ, ವ್ಯಕ್ತಿಯ ಜೀವ ಉಳಿಸುವಲ್ಲಿ ಶ್ರಮಿಸಿದ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post