ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಕಾಲೇಜಿನಲ್ಲಿ ನ.22 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆವರೆಗೆ `ಉದ್ಯೋಗಮೇಳ’ ನಡೆಯಲಿದೆ.
ಯಾವೆಲ್ಲಾ ಕಂಪೆನಿಗಳು ಪಾಲ್ಗೊಳ್ಳಲಿವೆ?
ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ರಾಣಿ ಮದ್ರಾಸ್, ಮೈಸೂರು, ಅಟೋಮೇಟೇಕ್ಸಿಲ್ ಮೈಸೂರು, ಇಬ್ಬನಿ ರೆಸಾರ್ಟ್ಸ್, ಮಡಿಕೇರಿ, ಅಪೋಲೋ ಫಾರ್ಮಸಿ, ಬೆಂಗಳೂರು, ಈಕ್ವಲೈಸರ್ ಆರ್’ಸಿ ಮೈಸೂರು, ಯುವ ಸ್ಪಂದನ, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
Also read: ಹಿಂದುಯೇತರರಿಗೆ ತಿರುಪತಿಯಿಂದ ಗೇಟ್ ಪಾಸ್ | ಐತಿಹಾಸಿಕ ನಿರ್ಧಾರ ಕೈಗೊಂಡ ಟಿಟಿಡಿ
ಈ ಉದ್ಯೋಗಮೇಳದಲ್ಲಿ ಎಸ್’ಎಸ್’ಎಲ್’ಸಿಗಿಂತ ಕಡಿಮೆ, ಎಸ್’ಎಸ್’ಎಲ್’ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 8296020826 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post