No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಲ್ಲಾ ವ್ಯವಹಾರ ಕನ್ನಡದಲ್ಲಿಯೆ ನಡೆದಾಗ ಭಾಷೆಯ ಬಗೆಗಿನ ಆತಂಕ ದೂರ: ಎಸ್.ಎನ್. ನಾಗರಾಜ

ಎ.ಟಿ.ಎನ್.ಸಿ.ಸಿ : ಆಚಾರ್ಯ ಕನ್ನಡ ಉತ್ಸವ

kalpa News by kalpa News
November 20, 2024
in ಶಿವಮೊಗ್ಗ
0
ಎಲ್ಲಾ ವ್ಯವಹಾರ ಕನ್ನಡದಲ್ಲಿಯೆ ನಡೆದಾಗ ಭಾಷೆಯ ಬಗೆಗಿನ ಆತಂಕ ದೂರ: ಎಸ್.ಎನ್. ನಾಗರಾಜ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾಷೆಯ ಬಳಕೆಯಿಂದ ಮಾತ್ರ ನಿಜವಾದ ಅaಭಿವೃದ್ಧಿ ಸಾಧ್ಯವಾಗಲಿದ್ದು, ಯುವ ಸಮೂಹ ಕನ್ನಡದ ಕಲಿಕೆಯತ್ತ ಹೆಚ್ಚು ಕುತೂಹಲ ಬೆಳೆಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಅಭಿಪ್ರಾಯಪಟ್ಟರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವತಿಯಿಂದ ಕುವೆಂಪು ವಿಶ್ವವಿದ್ಯಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಬುಧವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ‘ಆಚಾರ್ಯ ಕನ್ನಡ ಉತ್ಸವ – 2024’ ಉದ್ಘಾಟಿಸಿ ಮಾತನಾಡಿದರು.
ಭಾಷೆ ನಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಸಾಧನ. ಕರ್ನಾಟಕದ ನೆಲದಲ್ಲಿ ಕನ್ನಡದ ಉಳುವಿನ ಚರ್ಚೆ ನಡೆಯುವುದು ಬೇಸರದ ಸಂಗತಿ. ವಸಾಹತುಶಾಹಿ ಆಡಳಿತವಿದ್ದ ರಾಷ್ಟ್ರಗಳಲ್ಲಿ ಈ ಬಗ್ಗೆ ಗೊಂದಲವಿದೆ. ಮಾತನಾಡುವ ಭಾಷೆ ಮತ್ತು ಕಲಿಯುವ ಭಾಷೆಯ ನಡುವೆ ಗೊಂದಲಕ್ಕಿಡಾಗಿ, ಯಾವ ಭಾಷೆಯನ್ನು ಪರಿಪೂರ್ಣವಾಗಿ ಕಲಿಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಸರ್ಕಾರೇತರ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಗಳು ಕನ್ನಡದಲ್ಲಿಯೆ ನಡೆದಾಗ ಮಾತ್ರ ಭಾಷೆಯ ಬಗೆಗಿನ ಆತಂಕ ದೂರವಾಗಲಿದೆ. ಇಂಗ್ಲೀಷ್ ಎಂಬುದು ತುಂಬಾ ಅವ್ಯವಸ್ಥಿತವಾದ ಭಾಷೆ. ಇಂಗ್ಲೀಷ್ ಭಾಷೆಯ ತಪ್ಪು ಸರಿ ತಿದ್ದಲು ಇಂದಿಗೂ ಯಾವುದೇ ಅಕಾಡೆಮಿಗಳಿಲ್ಲ‌ ಎಂದು ಹೇಳಿದರು.

Also read: ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್-ಸಾಯಿರಾ 29 ವರ್ಷ ದಾಂಪತ್ಯ ಅಂತ್ಯ

ಕುವೆಂಪು ವಿವಿ ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷೆ ಡಾ.ಸಬಿತಾ ಬನ್ನಾಡಿ ಮಾತನಾಡಿ, ಭಾಷೆಗೆ ಕನ್ನಡದಲ್ಲಿ ನುಡಿ ಎಂದು ಕರೆಯುತ್ತಾರೆ. ಈ ನುಡಿ ಇಲ್ಲದೇ ಹೋಗಿದ್ದರೆ ಪ್ರಾಣಿಗಳಿಗಿಂತ ಮನುಷ್ಯ ವಿಭಿನ್ನವಾಗಿ ಕಾಣಲು ಸಾಧ್ಯವಾಗುತ್ತಿರಲಿಲ್ಲ.

ಅಂತಹ ನುಡಿಯನ್ನು ಸುಳ್ಳಿಗಾಗಿ, ಮನುಷ್ಯತ್ವವನ್ನು ಒಡೆಯಲಿಕ್ಕಾಗಿ, ಅಪಮಾನಕ್ಕಾಗಿ ಬಳಸಿಕೊಳ್ಳುವಾಗ ಯಾಕೆ ಈ ನುಡಿ ಬೇಕಿತ್ತು ಎಂದೆನಿಸುತ್ತದೆ. ಅದೇ ನುಡಿಯನ್ನು ಸಮಾನತೆಗಾಗಿ, ನ್ಯಾಯಕ್ಕಾಗಿ, ಸೃಜನಶೀಲ ಸಾಹಿತ್ಯಕ್ಕಾಗಿ ಬಳಸಿದಾಗ ಭಾಷೆ ಮನುಷ್ಯನಿಗೆ ಸಿಕ್ಕಿದ ಸಿರಿ ಎಂಬ ಧನ್ಯತೆ ಮೂಡುತ್ತದೆ.
ಎಂತಹ ವಿಚಾರಗಳನ್ನು ಸೃಜಿಸುವ ಶಕ್ತಿ ಕನ್ನಡ ಹೊಂದಿದೆ. ಜೊತೆಯಲ್ಲಿ ತನ್ನ ಮೇಲೆ ಆಗುತ್ತಿರುವ ನಿರಂತರ ದಾಳಿಗಳನ್ನು ಪ್ರತಿಭಟಿಸುವ ಶಕ್ತಿ ಕನ್ನಡಕ್ಕಿದೆ. ಯಾಕೆ ಹೀಗಾಯಿತು ಎನ್ನುವಾಗ ಅಧಿಕಾರಶಾಹಿ ಆಡಳಿತದಲ್ಲಿ ಆಗುತ್ತಿರುವ ಭಾಷೆಗಳ ನಡುವಿನ ತಾರತಮ್ಯ ಕಾರಣ ಎಂದು ಸ್ಪಷ್ಟವಾಗುತ್ತದೆ. ಪ್ರಕೃತಿ ನಮಗೆ ಸಮಾನ ಮೌಲ್ಯಗಳನ್ನು ನೀಡಿದೆ. ಕೈಬೆರಳಿನ ಹಾಗೆ ನಮ್ಮಲ್ಲಿ ವೈವಿಧ್ಯತೆಯಿದೆ. ಕನ್ನಡಕ್ಕೆ ಪ್ರಾಮುಖ್ಯತೆ ನೀಡುತ್ತ ಇತರ ಭಾಷೆಯೊಂದಿಗೆ ಸಹಬಾಳ್ವೆ ಮುಂದುವರೆಯಬೇಕಿದೆ.

ಭಾಷೆಗಳಲ್ಲಿ ಯಾವುದು ಶ್ರೇಷ್ಟವಲ್ಲ ಅಥವಾ ಕನಿಷ್ಟವಲ್ಲ. ಯೂರೋಪಿಯನ್ ಆಡಳಿತಾತ್ಮಕ ಹಿತದೃಷ್ಟಿಯಿಂದ ತಮ್ಮ ಭಾಷೆ ಶ್ರೇಷ್ಠ ಎಂಬ ಅಂಧತ್ವವನ್ನು ಮೂಡಿಸಿದರು. ಒಂದು ವಿಷಯವನ್ನು ವೈವಿಧ್ಯಮಯವಾಗಿ ಹೇಳಬಲ್ಲ, ರಕ್ತಹೀನತೆ ಇಲ್ಲದ ಭಾಷೆ ಕನ್ನಡ. ನಾವು ಮಾತನಾಡುವ ಕನ್ನಡದಲ್ಲಿ ಅದೆಷ್ಟೋ ಸಂಸ್ಕೃತ ಪದಗಳು ಬಳಕೆಯಾಗುತ್ತದೆ.‌ ಅದನ್ನು ನಾವು ಕನ್ನಡದ ಪದವೆ ಎಂದು ಬಳಸುತ್ತಿದ್ದೇವೆ. ಮಕ್ಕಳಿಗೆ ಮೂಲ ಕನ್ನಡ ಪದಗಳನ್ನು ಪರಿಚಯ ಮಾಡಿಕೊಡಬೇಕಿದೆ‌.

ಸರ್ಕಾರ ಇಂಗ್ಲೀಷ್ ಮಾಧ್ಯಮವನ್ನು ಅನಿವಾರ್ಯಗೊಳಿಸುತ್ತಿದೆ. ಲಾಭಕ್ಕಾಗಿ ಭಾಷೆಯನ್ನು ಬಂಡವಾಳವಾಗಿ ಮಾಡಿಕೊಂಡಿದ್ದಾರೆ. ಈ ಮೂಲಕ ನಮ್ಮ ಮಾತೃಭಾಷೆಯನ್ನು ಹಿಂದೆ ದೂಡುವಂತೆ ಮಾಡುತ್ತಿದ್ದಾರೆ. ಕೆಲವರು ಕನ್ನಡ ಭಾಷೆಯನ್ನು ಬಂಡವಾಳ ಮಾಡಿಕೊಂಡಿದ್ದಾರೆ. ತೋರಿಕೆಯ ಅಭಿಮಾನಕ್ಕಿಂತ ಕಟ್ಟುವಿಕೆಯ ದೀಕ್ಷೆಯನ್ನು ನಾವೆಲ್ಲ ತೊಡಬೇಕಿದೆ.
ಆಳುವ ಸರ್ಕಾರಗಳಿಗೆ ನನ್ನದೊಂದು ಪ್ರಶ್ನೆ, ಹಿಂದಿಯ ಬಗ್ಗೆ ನಿಮಗೆ ಮಮತೆಯಿದೆ, ಇಂಗ್ಲೀಷ್ ಬಗ್ಗೆ ವ್ಯಾಮೋಹವಿದೆ, ಅದರೇ ಕನ್ನಡಮ್ಮನ ಗುಡಿಯನ್ನು ಕಟ್ಟಲು, ಕನ್ನಡದ ಧ್ವಜವನ್ನು ಎತ್ತಿ ಹಿಡಿಯಲು ನಿಮಗೆ ಆಗುತ್ತಿಲ್ಲವೆ ಎಂಬ ಪ್ರಶ್ನೆ ನನ್ನದು ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಮಾತನಾಡಿದರು.

ಇದೇ ವೇಳೆ ಕರ್ನಾಟಕ ನಾಟಕ ಅಕಾಡೆಮಿ ಜಿಲ್ಲಾ ಸಂಚಾಲಕ ಗಣೇಶ್ ಕೆಂಚನಾಳ್ ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಎಪಿಎಂಸಿ ಉದ್ದಿಮೆದಾರ ಡಿ.ಎಸ್.ಚಂದ್ರು, ವಿವಿಧ ವಿಭಾಗಗಳ ನಿರ್ದೇಶಕರಾದ ಪ್ರೊ.ಕೆ.ಎಂ.ನಾಗರಾಜು, ಮಂಜುನಾಥ. ಎನ್, ಶ್ರೀಲಲಿತ, ಗಾಯತ್ರಿ, ಪ್ರವೀಣ್.ಬಿ.ಎನ್, ಚೈತ್ರ.ಕೆ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

                                                

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್-ಸಾಯಿರಾ 29 ವರ್ಷ ದಾಂಪತ್ಯ ಅಂತ್ಯ

Next Post

ಬಾಗಲಕೋಟೆ | ಕೊರಿಯರ್’ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ | ಆನ್ ಮಾಡಿದ ಮಹಿಳೆಯ ಕೈಗಳು ಛಿದ್ರ

kalpa News

kalpa News

Next Post
ಬಾಗಲಕೋಟೆ | ಕೊರಿಯರ್’ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ | ಆನ್ ಮಾಡಿದ ಮಹಿಳೆಯ ಕೈಗಳು ಛಿದ್ರ

ಬಾಗಲಕೋಟೆ | ಕೊರಿಯರ್'ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ | ಆನ್ ಮಾಡಿದ ಮಹಿಳೆಯ ಕೈಗಳು ಛಿದ್ರ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL