ಕಲ್ಪ ಮೀಡಿಯಾ ಹೌಸ್ | ಭೋಪಾಲ್ |
ಟ್ರಕ್ ಚಾಲಕನೊಬ್ಬ 15 ವರ್ಷದ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ #Rape on Girl ಎಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ರೈಸನ್ ಜಿಲ್ಲೆಯ ಸಿಯಾಮೌರ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಬಾಲಕಿ ತನ್ನ ಸ್ನೇಹಿತನೊಂದಿಗೆ ವನದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಳು. ಈ ವೇಳೆ ಅರಣ್ಯ ಪ್ರದೇಶದ ಬಳಿ ಬೈಕ್ ನಿಲ್ಲಿಸಿ ಕಾಡಿನೊಳಗೆ ತೆರಳಿದ್ದಾರೆ. ಇದೇ ವೇಳೆ ಆ ಜಾಗದಲ್ಲಿ ಟ್ರಕ್ ಕೆಟ್ಟು ನಿಂತಿದ್ದು, ಬಾಲಕಿಯನ್ನು ಗಮನಿಸಿದ ಟ್ರಕ್ ಚಾಲಕ ಹಾಗೂ ಆತನ ಸ್ನೇಹಿತರು ಅಪ್ರಾಪ್ತೆಯ ಸ್ನೇಹಿತನ ಬೈಕ್ ಕೀ ಕಸಿದುಕೊಂಡು ಆತನಿಗೆ ಥಳಿಸಿದ್ದಾರೆ. ಬಳಿಕ ಬಾಲಕಿಯ ಮೇಲೆ ಟ್ರಕ್ ಚಾಲಕ ಅತ್ಯಾಚಾರ ಎಸಗಿದ್ದಾನೆ ಎಂದು ವರದಿಯಾಗಿದೆ.
Also read: ಲಿವ್ ಇನ್ ಗೆಳತಿಯನ್ನು ಇರಿದು ಕೊಂದು ಸುಟ್ಟು ಹಾಕಿದ ವಿವಾಹಿತ ಉದ್ಯಮಿ
ಬಂಧಿತ ಟ್ರಕ್ ಚಾಲಕನನ್ನು #Truck Driver ಸಂಜು ಆದಿವಾಸಿ (21) ಎಂದು ಗುರುತಿಸಲಾಗಿದ್ದು, ಆತನ ಸಹಚರ ಶಿವನಾರಾಯಣ ಅಡ್ವಾಸಿಯನ್ನು ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ಅಕ್ಷಯ್ ಅಹಿವಾರ್ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post