ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಜಿಲ್ಲೆಯ ಹಲವು ಕಡೆಗಳಲ್ಲಿ ಬಾಣಂತಿಯರ ಸಾವಿನ #Death#Death ಸರಣಿ ಮುಂದುವರೆದಿದ್ದು, ವೈದ್ಯರ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕೆಲವು ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿಸಿಕೊಂಡ ನಂತರ ಮೂವರು ಬಾಣಂತಿಯರು ಸಾವನ್ನಪ್ಪಿದ್ದರು. ಹೊಸಪೇಟೆ ಮೂಲದ 22 ವರ್ಷದ ಮಹಿಳೆ ಸಾವಿನ ಬೆನ್ನಲ್ಲೇ ಭಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಬಾಣಂತಿ ಸಾವನ್ನಪ್ಪಿದ್ದಾಳೆ.
ಕೂಡ್ಲಿಗೆ ತಾಲೂಕಿನ ಹಾಲಸಾಗರ ಗ್ರಾಮದ 20 ವರ್ಷದ ಮಹಿಳೆ ಸಾವನ್ನಪ್ಪಿದ್ದಾಳೆ. ಭಾನುವಾರ ನಾರ್ಮಲ್ ಹೆರಿಗೆಯಾಗಿದ್ದ (ಸಾಮಾನ್ಯ ಹೆರಿಗೆ) ಆಕೆಗೆ ಗಂಡು ಮಗು ಜನಿಸಿತ್ತು.
ಹೆರಿಗೆ ಬಳಿಕ ಮಹಾಲಕ್ಷ್ಮಿ ಆರೋಗ್ಯದಲ್ಲಿ ಏರುಪೇರಾಗಿತ್ತು, ಹೀಗಾಗಿ ಐಸಿಯುನಲ್ಲಿ ಇಟ್ಟು ಮೂರು ದಿನ ಚಿಕಿತ್ಸೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಹಾಲಕ್ಷ್ಮಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿz್ದÁರೆ. ಆಸ್ಪತ್ರೆಗೆ ಕರೆತರುವ ಮುನ್ನ ಮಹಾಲಕ್ಷ್ಮಿ ಚೆನ್ನಾಗಿದ್ದಳು ಎಂದು ದೂರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post