ಕಲ್ಪ ಮೀಡಿಯಾ ಹೌಸ್ | ರಾಮನಗರ |
ಕೇವಲ ಎರಡು ದಿನಗಳ ಹಿಂದೆ ಜನಿಸಿದ ನವಜಾತ ಶಿಶುವೊಂದನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಎಸೆದು ಫ್ಲಶ್ #New Born child flushed in hospital Toilet ಮಾಡಿರುವ ಘೋರ ಅಮಾನವೀಯ ಘಟನೆ ರಾಮನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ರಾಮನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂತಹ ಅಮಾನವೀಯ ಘಟನೆ ನಡೆದಿದ್ದು, ರಾಜ್ಯವೇ ಬೆಚ್ಚಿ ಬಿದ್ದಿದೆ.
ಇಲ್ಲಿನ ಖಾಸಗೀ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಟಾಯ್ಲೆಟ್ ಪರಿಶಿಲನೆ ವೇಳೆ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಶೌಚಾಲಯದ ಗುಂಡಿ ಸ್ವಚ್ಛತೆಯ ಪರಿಶೀಲನೆ ನಡೆಸುವ ವೇಳೆ ಶಿಶುವಿನ ಮೃತದೇಹ ಪತ್ತೆಯಾಗಿರುವುದನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಆಘಾತಗೊಂಡಿದ್ದಾರೆ.
Also read: ಬಳ್ಳಾರಿಯಲ್ಲಿ ನಿಲ್ಲದ ಬಾಣಂತಿಯರ ಸಾವಿನ ಸರಣಿ | ವ್ಯಾಪಕ ಆಕ್ರೋಶ
ಯಾರು ಈ ಕೃತ್ಯ ಎಸಗಿದ್ದಾರೆ ಎಂದು ನಿಖರವಾಗಿ ತಿಳಿದುಬಂದಿಲ್ಲವಾದರೂ, ಶಿಶುವಿನ ತಾಯಿಯೇ ಎಸಗಿರುವ ಅನುಮಾನ ವ್ಯಕ್ತವಾಗಿದೆ ಎಂದು ವರದಿಯಾಗಿದೆ.
ಹಾರೋಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ. ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳನ್ನು ಪೊಲೀಸರು ವಿಚಾರಿಸಿದ್ದು, ದಾಖಲೆಗಳನ್ನೂ ಸಹ ಪರಿಶೀಲನೆ ನಡೆಸಿದ್ದಾರೆ.
ಈ ಶಿಶುವಿನ ತಂದೆ – ತಾಯಿ ಯಾರು, ಕೃತ್ಯ ಎಸಗಿದವರು ಯಾರು ಎಂಬ ಬಗ್ಗೆ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post