ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅತ್ತ ವಕ್ಪ್ ನೋಟಿಸ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಜನಜಾಗೃತಿ ಅಭಿಯಾನ, ಇತ್ತ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಬಣದ ನಿಷ್ಠರು ಮಧ್ಯ ಕರ್ನಾಟಕ ರಾಜಧಾನಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ.
ಈ ಕುರಿತು ಬುಧವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ಸೇರಿದ್ದ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್, ಮಾಜಿ ಶಾಸಕರಾದ ಎಂ.ವೈ.ಸಂಪಂಗಿ, ಎಂ.ಡಿ.ಲಕ್ಷ್ಮಿನಾರಾಯಣ, ತಿಪ್ಪರಾಜು, ಬಸವರಾಜ್ ಸಭೆ ನಡೆಸಿ ದಾವಣಗೆರೆಯಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ಕೆಲವರು ಪಕ್ಷಕ್ಕಿಂತ ನಾನೇ ದೊಡ್ಡವನೆಂದು ಬಿಂಬಿಸಿಕೊಂಡು ನಾಲ್ಕಾರು ಜನರ ಮೂಲಕ ಅಭಿಯಾನ ನಡೆಸುತ್ತಿದ್ದಾರೆ. ಇದು ಪಕ್ಷದ ಹಿತಕ್ಕಿಂತ ಸ್ವಾರ್ಥವೇ ಹೆಚ್ಚಾಗಿದೆ ಎಂದು ವಾಗ್ದಾಳಿ ನಡೆಸಿದರು.
Also read: ಜಾತಿ-ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮದ್ರೋಹಿಗಳು: ಸಿಎಂ
ವಿಜಯೇಂದ್ರ ಅವರನ್ನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದು ಈಗ ಪಾದಯಾತ್ರೆ ನಡೆಸುತ್ತಿರುವವರಲ್ಲ. ಪ್ರಧಾನಿ ನರೇಂದ್ರಮೋದಿ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸಂಪೂರ್ಣವಾಗಿ ಬೆಂಬಲ ಕೊಟ್ಟಿದ್ದಾರೆ.
ಆದರೆ ಉದ್ದೇಶಪೂರ್ವಕವಾಗಿಯೇ ಪಕ್ಷದೊಳಗೆ ಬೆಂಬಲ ಸೂಚಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಯತ್ನಾಳ್ ಹಾಗೂ ಅವರ ತಂಡದ ವಿರುದ್ದ ಕಿಡಿಕಾರಿದರು.
ನೀವು ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಟೀಕಿಸಿದರೆ ಮೋದಿ, ಮತ್ತು ಅಮಿತ್ ಷಾ ಅವರನ್ನು ಟೀಕಿಸಿದಂತೆ. ಯಡಿಯೂರಪ್ಪ ರಾಜಕೀಯಕ್ಕೆ ಬಂದಾಗ ಕೆಲವರು ಇನ್ನು ಕಣ್ಣೇ ಬಿಟ್ಟಿರಲಿಲ್ಲ. ಅಂಥವರು ಕೂಡ ನಾಲ್ಕು ಮಂದಿ ಕಟ್ಟಿಕೊಂಡು ಪ್ರಚಾರಕ್ಕಾಗಿ ಅಭಿಯಾನ ಮಾಡುತ್ತಿದ್ದಾರೆ.ಇದಕ್ಕೆ ಕವಡೆಕಾಸಿನ ಕಿಮ್ಮಿತ್ತಿನ ಬೆಲೆ ಇಲ್ಲ ಎಂದು ಕೆಂಡಕಾರಿದರು.

ಯತ್ನಾಳ್ ಅವರೇ ನಿಮ್ಮ ಹೋರಾಟ ಯಾರ ವಿರುದ್ಧ, ಕಾಂಗ್ರೆಸ್ ವಿರುದ್ಧ ಇರಬೇಕು. ಮುಹಮ್ಮದ್ ಬಿಲ್ ತುಘಲಕ್ ತರ ಪ್ರವಾಸ ಹೊರಟಿದ್ದಾರೆ. ಸಿದ್ದರಾಮಯ್ಯ ಅಡಿಯಾಳಾಗಿ ಕೆಲಸ ಮಾಡ್ತಿದ್ದಾರೆ. ನಮ್ಮಲ್ಲಿ ಸಿಎಂ ಆಗುತಾರೆ ಎಂದು ಹೇಳಲು ಯತ್ನಾಳ್ ಗೆ ಏನು ಅಧಿಕಾರ ಇದೆ. ಯಡಿಯೂರಪ್ಪ ಅವರಿಗೂ ಅಧಿಕಾರ ಇಲ್ಲ. ಸ್ವಾರ್ಥಕ್ಕಾಗಿ ಕೆಟ್ಟ ಉದ್ದೇಶದಿಂದ ಕೆಲಸ ಮಾಡ್ತಾರೆ. ಯಡಿಯೂರಪ್ಪ ರಕ್ಷಣೆಗೆ ಏಕೆ ನಿಲ್ಲುತ್ತಿಲ್ಲ ಎಂದು ನಮ್ಮನ್ನು ಕಾರ್ಯಕರ್ತರು ಕೇಳ್ತಿದ್ದಾರೆ. ಅವರಿಗೆ ಉತ್ತರ ಹೇಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ನೀವು ನಡೆಸುತ್ತಿರುವ ಹೋರಾಟ ಸಿದ್ದರಾಮಯ್ಯ ಮೋರ್ಚಾ ಎಂದು ಹಿರಿಯ ಮುತ್ಸದ್ದಿ ವಿಶ್ವನಾಥ್ ಅವರೇ ಹೇಳಿದ್ದಾರೆ. ನರಿ ಕಥೆ ನಿಮಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.
ಕೋಲಾರದ ಮುಳಬಾಗಿಲು ಭೇಟಿ ಬಳಿಕ ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಬಿಜೆಪಿ ಬಲವರ್ಧನೆಗಾಗಿ, ಅಲ್ಲಿಂದ ಮುರುಡೇಶ್ವರ ದರ್ಶನ ಪಡೆದು ರವೀಂದ್ರ ನಾಥ್ ಪಾಟೀಲ್ ಅಧ್ಯಕ್ಷತೆಯಲ್ಲಿ ಪೂರ್ವ ಬಾವಿ ಸಭೆಯನ್ನು ನಡೆಸುತ್ತೇವೆ. ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ನಿಟ್ಟಿನಲ್ಲಿ ದಾವಣಗೆರೆಯಲ್ಲಿ ಸಮಾವೇಶ ಮಾಡುತ್ತೇವೆ ಎಂದರು. 29 ರಂದು ಹತ್ತು ಗಂಟೆಗೆ ಹೊರಟು ಕೋಲಾರ ಮುಳಬಾಗಿಲು ಗಣೇಶನ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸುತ್ತೇವೆ. ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇವೆ. ಯಡಿಯೂರಪ್ಪ ಕಷ್ಟದಲ್ಲಿ ಪಕ್ಷ ಕಟ್ಟಿದ್ದಾರೆ. ಕರ್ನಾಟಕದಲ್ಲಿ ಅಧಿಕಾರ ತರಲು ಅವರ ಪಾತ್ರ ಪ್ರಮುಖವಾಗಿದೆ. ಪಕ್ಷ ಕಟ್ಟಿದ ನಾಯಕರ ಬಗ್ಗೆ ಮಾತನಾಡುವುದು ರಾಷ್ಟ್ರೀಯ ನಾಯಕರ ವಿರುದ್ಧ ಮಾತನಾಡಿದಂತೆ ಎಂದು ಕಿಡಿಕಾರಿದರು.
ಯತ್ನಾಳ್ ಅವರೇ ನಿಮ್ಮ ಹೋರಾಟ ಯಾರ ವಿರುದ್ಧ, ಕಾಂಗ್ರೆಸ್ ವಿರುದ್ಧ ಇರಬೇಕು. ಮುಹಮ್ಮದ್ ಬಿಲ್ ತುಘಲಕ್ ತರ ಪ್ರವಾಸ ಹೊರಟಿದ್ದಾರೆ. ಸಿದ್ದರಾಮಯ್ಯ ಅಡಿಯಾಳಾಗಿ ಕೆಲಸ ಮಾಡ್ತಿದ್ದಾರೆ ಎಂದು ಆರೋಪಿಸಿದರು. ನಮ್ಮಲ್ಲಿ ಸಿಎಂ ಆಗ್ತಾರೆ ಎಂದು ಹೇಳಲು ಯತ್ನಾಳ್ ಗೆ ಏನು ಅಧಿಕಾರ ಇದೆ. ಯಡಿಯೂರಪ್ಪ ಅವರಿಗೂ ಅಧಿಕಾರ ಇಲ್ಲ. ಸ್ವಾರ್ಥಕ್ಕಾಗಿ ಕೆಟ್ಟ ಉದ್ದೇಶದಿಂದ ಕೆಲಸ ಮಾಡ್ತಾರೆ. ಯಡಿಯೂರಪ್ಪ ರಕ್ಷಣೆಗೆ ಏಕೆ ನಿಲ್ಲುತ್ತಿಲ್ಲ ಎಂದು ನಮ್ಮನ್ನು ಕಾರ್ಯಕರ್ತರು ಕೇಳ್ತಿದ್ದಾರೆ. ಅವರಿಗೆ ಉತ್ತರ ಹೇಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಮಾಜಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ವಿಜಯೇಂದ್ರ ಸಾರಥ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಇದು ಕಾರ್ಯಕರ್ತರ ಒಕ್ಕೋಲರ ಅಭಿಪ್ರಾಯವಾಗಿದೆ. ಕೆಲವರು ಆಗಲೇ ನಮ್ಮ ಬಣದವರೇ ಮುಖ್ಯಮಂತ್ರಿಯಾಗಲಿ ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರ ಆಸೆ ಈಡೆರುವುದಿಲ್ಲ ಎಂದು ಪರೋಕ್ಷವಾಗಿ ಯತ್ನಾಳ್‍ಗೆ ತಿರುಗೇಟು ಕೊಟ್ಟರು.

ಯಡಿಯೂರಪ್ಪ ರಾಜಕಾರಣಕ್ಕೆ ಬಂದಾಗ ಇವರು ಕಣ್ಣೇ ಬಿಟ್ಟಿರಲಿಲ್ಲ. ಕೇವಲ ನಾಲ್ಕೈದು ಜನರು ಸೇರಿ ರಾಜ್ಯಾಧ್ಯಕ್ಷರನ್ನು ಇಳಿಸುತ್ತೇವೆ ಎಂದು ಹೋದರೆ ಅದು ಅವರ ಭ್ರಮೆ ಎಂದು ಟೀಕಿಸಿದರು.
ಯತ್ನಾಳ್ ಟೀಮ್ ಜೊತೆ ಹೋಗಿ ಯುದ್ದ ಮಾಡುವುದಕ್ಕೆ ಆಗುವುದಿಲ್ಲ. ಆದರೆ ಅವರ ಟೀಕೆಗೆ ನಾವು ತಕ್ಕ ಉತ್ತರ ಕೊಡಬೇಕು. ಯತ್ನಾಳ್ ಪ್ರತ್ಯೇಕ ಹೋರಾಟದಿಂದ ಪಕ್ಷದಲ್ಲಿ ತೊಂದರೆಯಾಗಿದೆ. ಕಾರ್ಯಕರ್ತರು ಎಲ್ಲರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






Discussion about this post