ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪರಮಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendra Swamy Mutt ನ.28ರ ಗುರುವಾರ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ವಾದೀಂದ್ರಾಚಾರ್ಯರ ಮಾರ್ಗದರ್ಶನದಲ್ಲಿ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳು, ರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ ಮತ್ತು ಮಹಾ ಮಂಗಳಾರತಿ ನಂತರ ಸಹಸ್ರಾರು ಭಕ್ತರಿಗೆ ಅನ್ನದಾನ ಸೇವೆ ಜರುಗಿದವು ಎಂದು ನಂದ ಕಿಶೋರ್ ಆಚಾರ್ಯರು ತಿಳಿಸಿದರು.
Also read: ಡಿ. 2-20 | ಗೀತಾ ಜಯಂತಿ ಪ್ರಯುಕ್ತ ಉತ್ತರಾದಿ ಮಠದಲ್ಲಿ “ಗೀತಾ ಜ್ಞಾನ ಯಜ್ಞ”
ನಂತರ ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಪಲ್ಲಕ್ಕಿ ಉತ್ಸವ, ನರ್ತನ ಸೇವೆ, ಗಜವಾಹನೋತ್ಸವ ತೊಟ್ಟಿಲು ಸೇವೆ ಕಾರ್ತೀಕ ದೀಪೋತ್ಸವಗಳ ಸೇವೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಮಾಲಾ ವೆಂಕಟೇಶ್ ಮತ್ತು ಅವರ ಶಿಷ್ಯೆ ಕು|| ಸ್ಫೂರ್ತಿ ಗುರುಪ್ರಸಾದ್ ಅವರಿಂದ ವೀಣಾ ವಾದನ ಕಾರ್ಯಕ್ರಮವು ಜರುಗಿತು. ಇವರ ವೀಣಾ ವಾದನಕ್ಕೆ ಸಹವಾದ್ಯದಲ್ಲಿ ವಿದ್ವಾನ್ ಮುರಳಿ ನಾರಾಯಣರಾವ್ ಮೃದಂಗದಲ್ಲಿ ಹಾಗೂ ವಿದ್ವಾನ್ ಬಾಲಸುಬ್ರಹ್ಮಣ್ಯಂ ಘಟದಲ್ಲಿ ಸಾಥ್ ನೀಡಿದರು ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
ಹರಿದಾಸರ ಕೃತಿಗಳ ಪ್ರಸ್ತುತಿ
ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಬೆಂಗಳೂರಿನ ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಂಜನಗೂಡಿನ ರೇಖಾ ಭಟ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಕೃತಿಗಳನ್ನು ಪ್ರಸ್ತುತಪಡಿಸಿದರು. ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಸರ್ವೋತ್ತಮ ಸಾಥ್ ನೀಡಿದರು ಎಂದು ಗೊಗ್ಗಿ ಕೃಷ್ಣಾಚಾರ್ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post