ಕಲ್ಪ ಮೀಡಿಯಾ ಹೌಸ್ | ಉಡುಪಿ |
ಸಂವಿಧಾನ ಬದಲಿಸಬೇಕು ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು #Pejawara Shri ಹೇಳಿಕೆ ನೀಡಿದ್ದಾರೆ ಎಂಬ ಕುರಿತಾಗಿ ಸಿಎಂ ನೀಡಿರುವ ಹೇಳಿಕೆಗೆ ಸ್ವತಃ ಸ್ವಾಮಿಗಳೇ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಶ್ರೀಗಳು, ನಾವು ಸಂವಿಧಾನ #Constitution ಬದಲಿಸಬೇಕೆಂದು ಹೇಳಿಕೆ ನೀಡಿಲ್ಲ. ಮುಖ್ಯಮಂತ್ರಿಗಳು #ChiefMinister ಪರಿಶೀಲಿಸಿ ಮಾತನಾಡಬೇಕಿತ್ತು. ರಾಜ್ಯಪಾಲರಿಗೆ ಕೊಟ್ಟ ಪ್ರತಿಯಲ್ಲಿ ಸಂವಿಧಾನ ಕುರಿತು ಯಾವುದೇ ಉಲ್ಲೇಖ ಮಾಡಿಲ್ಲ ಎಂದಿದ್ದಾರೆ.
Also read: ಕೊಡಗಿನಲ್ಲಿ ರೆಡ್ ಅಲರ್ಟ್ | ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಆಡದೆ ಇರುವ ಮಾತುಗಳಿಗೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಮ್ಮನ್ನು ಖಂಡಿಸುವ, ಪ್ರತಿಭಟಿಸುವ ಕೆಲಸವಾಗುತ್ತಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಸಹಬಾಳ್ವೆಯಿಂದ ಇದ್ದೇನೆ. ಹಿಂದೂ ಸಮಾಜಕ್ಕೆ ಹಲವು ಮುಖಗಳಿವೆ. ಅದನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ. ಆಡಿದ ಮಾತಿಗೆ ವಿರೋಧಿಸಿ, ಆಡದ ಮಾತಿಗೆ ಯಾಕೆ ವಿರೋಧ. ವರದಿಗಾರರಿಗೆ ನಾನು ಆಡದೆ ಇರುವ ಮಾತು ಎಲ್ಲಿ ಸಿಕ್ಕಿತೋ ಗೊತ್ತಿಲ್ಲ. ಸಮಾಜದಲ್ಲಿ ಕಲಹ ಸೃಷ್ಟಿಸುವ ಕೆಲಸ ಮಾಡಬಾರದು ಎಂದಿದ್ದಾರೆ.
ಜನಗಣತಿ ಹೇಳುವ ಪ್ರಕಾರ ಇದು ಹಿಂದೂಸ್ತಾನ. ಬಹುಸಂಖ್ಯಾತ ಹಿಂದೂಗಳ ರಾಷ್ಟ್ರ. ಹೀಗಾಗಿ ಇಲ್ಲಿ ಹಿಂದುಗಳ ಭಾವನೆಗಳಿಗೆ ಬೆಲೆ ಕೊಡುವ ಸರ್ಕಾರ ಬರಬೇಕು ಎಂದಿದ್ದೇನೆ. ಸಂವಿಧಾನ ಶಬ್ಧವನ್ನೇ ಬಳಸಿಲ್ಲ. ಚುನಾಯಿತ ಸರ್ಕಾರಗಳು ಸರ್ವರ ಸರ್ಕಾರವಾಗಬೇಕು. ಅತಿಯಾದ ಮತೀಯ ಓಲೈಕೆ ಆಗಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post