ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಗೋವಿಂದಪುರ ಮತ್ತು ಗೋಪಿಶೆಟ್ಟಿ ಕೊಪ್ಪದಲ್ಲಿ ನಿರ್ಮಾಣವಾಗಿರುವ ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ಶೀಘ್ರದಲ್ಲಿ ಹಸ್ತಾಂತರಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್ ತಂಗರಾಜ್ ವಸತಿ ಸಚಿವರಿಗೆ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಇಂದು ವಸತಿ ಸಚಿವ ಜಮೀರ್ ಅಹ್ಮದ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, 2017ರಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ಸೂರನ್ನು ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಿದ್ದು, ತದನಂತರ ಬಂದ ಬಿಜೆಪಿ ಸರ್ಕಾರವು ಮನೆಗಳ ನಿರ್ಮಾಣದಲ್ಲಿ ನಿರಾಸಕ್ತಿ ತೋರಿದೆ. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ ಬಹಳಷ್ಟು ಮನೆಗಳ ನಿರ್ಮಾಣ ಕಾರ್ಯವು ಮುಗಿದಿದೆ. ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಕಲ್ಪಿಸಿ ಆದಷ್ಟು ಬೇಗ ಹಣ ಕಟ್ಟಿದ ಅರ್ಹ ಫಲಾನುಭವಿಗಳಿಗೆ ಅತಿ ಶೀಘ್ರದಲ್ಲಿ ಮನೆಗಳನ್ನು ಹಸ್ತಾಂತರಿಸಬೇಕೆಂದು ಆಶ್ರಯ ಮನೆ ಫಲಾನುಭವಿಗಳ ಪರವಾಗಿ ಸಚಿವರ ಬಳಿ ಮನವಿ ಮಾಡಿದರು.
Also read: 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ | ‘ಗಾಂಧಿ ಭಾರತ’ ಕಾರ್ಯಕ್ರಮಕ್ಕೆ ನಿರ್ಣಯ
ಇದಕ್ಕೆ ಸ್ಪಂದಿಸಿದ ಸಚಿವರು ಈ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದು ಶೀಘ್ರದಲ್ಲಿ ಮನೆಗಳನ್ನು ಹಸ್ತಾಂತರಿಸುವ ಕಾರ್ಯ ಆಗಲಿದೆ ಎಂದು ಭರವಸೆ ನೀಡಿದ್ದು. ಆದಷ್ಟು ಬೇಗ ಬಡವರಿಗೆ ತಮ್ಮ ಕನಸಿನ ಸೂರು ಕೈ ಸೇರಲಿದೆ ಎಂದು ತಂಗರಾಜ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post