ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರ #Sagar ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಎದುರಿನಲ್ಲಿರುವ ಖಾಸಗಿ ವಸತಿಗೃಹದಲ್ಲಿ ಶಿರಸಿ #Sirsi ಮೂಲದ ಜಿತೇಂದ್ರ ಮಹಾಬಲೇಶ್ವರ ನಾಯ್ಕ್ (33) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಲಾಡ್ಜ್‌ಗೆ #Lodge ಬಂದು ರೂಮ್ ಮಾಡಿಕೊಂಡಿದ್ದ ಜಿತೇಂದ್ರ 7 ಗಂಟೆ ಸುಮಾರಿಗೆ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ.
ಸುಮಾರು 5 ವರ್ಷದಿಂದ ಹೊಸನಗರ ಪಟ್ಟಣದಲ್ಲಿ ಬೇಕರಿ ವ್ಯವಹಾರ ನಡೆಸುತ್ತಿದ್ದ ಜಿತೇಂದ್ರ ವಿಪರೀತ ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post