ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ಸಿ.ಬಿ.ಆರ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಡಿ.13 ರ ಶುಕ್ರವಾರ ಬೆಳಗ್ಗೆ 10:30 ಕ್ಕೆ ಚಂದನ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ‘ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತರ ಪಾತ್ರ’ ಕುರಿತಾಗಿ ಕರ್ನಾಟಕ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಮಾತನಾಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಕಾಲೇಜಿನ ಪ್ರಾಂಶುಪಾಲೆ ಡಾ.ಎ.ಅನಲ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.
Also read: ಜಂಕ್ ಫುಡ್ ತ್ಯಜಿಸುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ನೋಡಿ
ಜಿ. ಮಧು ಅವರ ಭಾವಚಿತ್ರ ಅನಾವರಣ
ಜಿಲ್ಲಾ ವಕೀಲರ ಸಂಘ ಹಾಗೂ ಖ್ಯಾತ ವಕೀಲರಾಗಿದ್ದ ಜಿ.ಮಧು ಕಿರಿಯ ವಕೀಲರ ಬಳಗ ಮತ್ತು ಕುಟುಂಬಸ್ಥರ ವತಿಯಿಂದ ಡಿ.13 ರ ಶುಕ್ರವಾರ ಸಂಜೆ 06:30 ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲ ಜಿ.ಮಧು ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭಾವಚಿತ್ರ ಅನಾವರಣಗೊಳಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಭಾಗವಹಿಸಲಿದ್ದಾರೆ. ಹಿರಿಯ ವಕೀಲರಾದ ಜಿ.ಎಸ್.ನಾಗರಾಜ, ಎನ್.ದೇವೇಂದ್ರಪ್ಪ ಉಪಸ್ಥಿತರಿರಲಿದ್ದು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.
ಇದಕ್ಕು ಮುನ್ನ ವಿದುಷಿ ವಿಜಯಲಕ್ಷ್ಮೀ ಅವರಿಂದ ವೀಣಾ ವಾದನ ಏರ್ಪಡಿಸಲಾಗಿದ್ದು, ಎಲ್ಲಾ ವಕೀಲ ವೃಂದದವರು ಹಾಗೂ ಜಿ.ಮಧು ಹಿತೈಷಿಗಳು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿಕೊಡಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಸಂಘಟಕರು ವಿನಂತಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post