ಕಲ್ಪ ಮೀಡಿಯಾ ಹೌಸ್ | ಜೈಪುರ |
150 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಐದು ವರ್ಷದ ಬಾಲಕನನ್ನು ಹೊರತೆಗೆಯಲು 56 ಗಂಟೆಯ ರಕ್ಷಣಾ ಕಾರ್ಯಾಚರಣೆಯ ಹೊರತಾಗಿಯೂ ಬಾಲಕ ಮೃತಪಟ್ಟಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ನಡೆದಿದೆ.
ಎರಡು ದಿನಗಳ ಕಾಲ ಕೊಳವೆ ಬಾವಿಯೊಳಗೆ ಸಿಲುಕಿದ್ದ ಬಾಲಕ ಹೊರಗೆ ತೆಗೆಯುವಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ, 56 ಗಂಟೆಯ ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ನಿನ್ನೆ ರಾತ್ರಿ ಆತನನ್ನು ಕೊಳವೆಬಾವಿಯಿಂದ ಹೊರ ತೆಗೆದು, ‘ಸುಧಾರಿತ ಜೀವರಕ್ಷಕ ವ್ಯವಸ್ಥೆ ಹೊಂದಿದ್ದ ಆಂಬ್ಯುಲೆನ್ಸ್‌ನಲ್ಲಿ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿತ್ತು ಆದರೆ ಅಲ್ಲಿ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
Also read: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ | ಸರ್ಕಾರದ ವಿರುದ್ದ ಬಿಜೆಪಿ ನಾಯಕರ ಪ್ರತಿಭಟನೆ
ಕಾಲಿಖಾಡ್ ಗ್ರಾಮದಲ್ಲಿ ಕೃಷಿ ಭೂಮಿಯೊಂದರಲ್ಲಿ ಆಟವಾಡುತ್ತಿದ್ದ ಆರ್ಯನ್ ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ. ಒಂದು ಗಂಟೆಯ ನಂತರ ರಕ್ಷಣಾ ಕಾರ್ಯಾಚರಣೆ ಆರಂಭವಾಯಿತು. ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಪೈಪ್ ಮೂಲಕ ಆಮ್ಲಜನಕ ಪೂರೈಕೆ ಆರಂಭಿಸಿ ಮಗುವಿನ ಚಲನವಲನ ಸೆರೆಹಿಡಿಯಲು ಕ್ಯಾಮರಾ ಇರಿಸಲಾಗಿತ್ತು. ಮಗು ಇದ್ದ ಸ್ಥಳವನ್ನು ತಲುಪಲು ಡ್ರಿಲ್ಲಿಂಗ್ ಮೆಷಿನ್‌ಗಳನ್ನು ಬಳಸಿ ಸಮಾನಾಂತರವಾಗಿ ಗುಂಡಿಯನ್ನು ತೆಗೆಯಲಾಗಿತ್ತು.
ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಕಾರ್ಯಾಚರಣೆ ಸಾಕಷ್ಟು ಸವಾಲಾಗಿತ್ತು. ಮಗು ಬಿದ್ದ ಪ್ರದೇಶದಲ್ಲಿ ಸುಮಾರು 160 ಅಡಿಗಳಷ್ಟು ನೀರು ಇತ್ತು. ಯಾವುದೇ ಚಲನವಲನವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುವುದು ಕಷ್ಟಕರವಾಗಿತ್ತು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿ ತಿಳಿಸಿದ್ದಾರೆ.
Discussion about this post