ಕಲ್ಪ ಮೀಡಿಯಾ ಹೌಸ್ | ಅಮರಾವತಿ |
ಸಂಧ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್ #AlluArjun ಒಂದು ರಾತ್ರಿ ಜೈಲಿನಲ್ಲಿ ಕಳೆದು ಇಂದು ಮುಂಜಾನೆ ಬಿಡುಗಡೆಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಶುಕ್ರವಾರ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅವರ ಮನೆಯಿಂದಲೇ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ #JudicialCustody ವಹಿಸಲಾಗಿತ್ತು. ಆದರೆ, ಸಂಜೆ ವೇಳೆಗೆ ತೆಲಂಗಾಣ #Telangana ಹೈಕೋರ್ಟ್’ನಿಂದ ಅಲ್ಲು ಅರ್ಜುನ್’ಗೆ ಮಧ್ಯಂತರ ಜಾಮೀನು ದೊರೆತಿತ್ತು.
ಜೈಲಾಧಿಕಾರಿಗಳ ಕೈಗೆ ಜಾಮೀನು ಪ್ರತಿ ಸಿಕ್ಕಿದ್ದು, ತಂದೆ ಅಲ್ಲು ಅರವಿಂದ್ ಜೊತೆ ಅಲ್ಲು ಅರ್ಜುನ್ ಹೊರಟಿದ್ದಾರೆ.

ಗೀತಾ ಆರ್ಟ್ಸ್ ಕಚೇರಿ ಕಡೆ ನಟ ತೆರಳಿದ್ದು, ಇಲ್ಲಿಂದ ನೇರವಾಗಿ ತಮ್ಮ ನಿವಾಸದ ಕಡೆ ಹೊರಡಲಿದ್ದಾರೆ. ಮನೆಯ ಬಳಿ ಪೊಲೀಸರ ಭಾರೀ ಭದ್ರತೆ ಕಲ್ಪಿಸಲಾಗಿದೆ.
ನಿನ್ನೆ ರಾತ್ರಿ ಜೈಲು ಬಳಿ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಪ್ರಸಂಗ ಕೂಡ ನಡೆಯಿತು.

ಈ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಸಾವನ್ನಪ್ಪಿದ್ದರು. ಅವರ ಮಗನಿಗೆ ಗಾಯಗಳಾಗಿವೆ. ಈ ಘಟನೆಗೆ ಸಂಬಂಧಿಸಿ ರೇವತಿ ಪತಿ ದೂರು ನೀಡಿದ್ದರು. ಈ ಬೆನ್ನಲ್ಲೇ ಎಫ್’ಐಆರ್ ದಾಖಲಿಸಿರುವ ಪೊಲೀಸರು, ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post