ಕಲ್ಪ ಮೀಡಿಯಾ ಹೌಸ್ | ಬೆಳಗಾವಿ ಸುವರ್ಣಸೌಧ |
ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು #Beyond Bengaluru ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮ ಉದ್ದಿಮೆಗಳು #Innovative Business ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ #Minister Priyanka Kharge ಹೇಳಿದರು.
ಅವರು ವಿಧಾನ ಪರಿಷತ್ತಿನಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ನಡೆದ ವಿಶೇಷ ಚರ್ಚೆ ಸಂದರ್ಭದಲ್ಲಿ ಉತ್ತರಿಸಿದರು.
ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆ , ಹೊಸ ಆವಿಷ್ಕಾರಗಳನ್ನು ಮಾಡುವ ನಿಟ್ಟಿನಲ್ಲಿ 432 ನವೋದ್ಯಮ ಉದ್ದಿಮೆಗಳ ಆರಂಭಕ್ಕೆ ನೋಂದಣಿ ಮಾಡಿಕೊಂಡಿದ್ದು ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಯಾಗಲಿದ್ದು, ನಿಪುಣ ಕರ್ನಾಟಕ ಯೋಜನೆಯಡಿ ಕೂಡಾ ಈ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದೆ ಎಂದರು.
Also read: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿ ನೇಮಕ

ಸದಸ್ಯ ಎಂ. ನಾಗರಾಜ್ ಮಾತನಾಡಿ, ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆ ಗಳ ಸ್ಥಾಪನೆ ಆಗಬೇಕು, ನೀರಾವರಿ ಸಮಸ್ಯೆಗಳ ಬಗ್ಗೆ ಕೇಂದ್ರದ ಮೇಲೆ ಒತ್ತಡ ತಂದು ಬಗೆಹರಿಸಿಕೊಳ್ಳಬೇಕು ಎಂದರು.
ಸದಸ್ಯರಾದ ಡಿ.ಟಿ.ಶ್ರೀನಿವಾಸ್ , ಪ್ರತಾಪ್ ಸಿಂಹ ನಾಯಕ್ ಮಾತನಾಡಿದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post