No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಹೋರಿಗಳ ಮಿಂಚಿನ ಓಟ, ಪೈಲ್ವಾನರ ಬಲ ಪ್ರದರ್ಶನ | ಹೇಗಿತ್ತು ಹೋರಿ ಬೆದರಿಸುವ ಹಬ್ಬ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 16, 2024
in ಸೊರಬ
0
ಸೊರಬ | ಹೋರಿಗಳ ಮಿಂಚಿನ ಓಟ, ಪೈಲ್ವಾನರ ಬಲ ಪ್ರದರ್ಶನ | ಹೇಗಿತ್ತು ಹೋರಿ ಬೆದರಿಸುವ ಹಬ್ಬ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಮಿಂಚಿನ ಓಟ ಓಡುತ್ತಿದ್ದ ಹೋರಿಗಳು, ಬಲ ಪ್ರದರ್ಶನ ತೋರಲು ಮುಂದಾಗಿದ್ದ ಪೈಲ್ವಾನರು, ಹೋರಿ ಪ್ರಿಯರ ಹರ್ಷೋದ್ಗಾರದ ನಡುವೆ ಪಟ್ಟಣದ ಹೊರವಲಯದ ಹಳೇಸೊರಬ ಗ್ರಾಮದಲ್ಲಿ ರಾಮೇಶ್ವರ ಯುವಕ ಸಂಘ ಹಾಗೂ ಗ್ರಾಮಾಭಿವೃದ್ಧಿ ಸಮಿತಿಯಿಂದ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ ವಿಜೃಂಭಣೆಯಿಂದ #Bull Bullying Festival ಜರುಗಿತು.

ಹಬ್ಬಕ್ಕೆ ಚಾಲನೆ ನೀಡಿದ ಸಾಗರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಜನಪದ‌ ಕ್ರೀಡೆಯಾದ ಹೋರಿ ಹಬ್ಬ ಉಳಿಯಬೇಕು ಮತ್ತು ಬೆಳೆಯಬೇಕು. ರೈತ ಸಮುದಾಯದವರು ಸಂಭ್ರಮಿಸುವ ಹಬ್ಬವಾಗಿದೆ. ಯಾವುದೇ ಜಾತಿ ಧರ್ಮವಿಲ್ಲದೇ ಎಲ್ಲರೂ ಒಗ್ಗೂಡಿ ಹಬ್ಬ ಆಚರಿಸುತ್ತಾರೆ. ಹಬ್ಬದಲ್ಲಿ ಪಾಲ್ಗೊಳ್ಳುವವರು ಸುರಕ್ಷತೆಗೆ ಹೆಚ್ಚಿನ ಗಮನ ನೀಡಬೇಕು ಎಂದರು.
ಮಲೆನಾಡು ಹಾಗೂ ಬಯಲುಸೀಮೆ ಭಾಗದ ಹಬ್ಬವಾಗಿರುವ ಜನಪದ ಕ್ರೀಡೆ ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬದ ಅಖಾಡದಲ್ಲಿ ಯಾರ ಕೈಗೂ ಸಿಗದಂತೆ ಓಡುತ್ತಿರುವ ಹೋರಿಗಳನ್ನು ಕಣ್ತುಂಬಿಕೊಳ್ಳಲು ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸಾವಿರಾರು ಹೋರಿ ಹಬ್ಬದ ಅಭಿಮಾನಿಗಳು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಶರವೇಗದಲ್ಲಿ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರಲ್ಲಿ ಮೈನವಿರೇಳಿಸಿತು.

ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಟೇಪು, ಬಲೂನುಗಳು ಮತ್ತು ಒಣ ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಕೊಬ್ಬರಿ ಹೋರಿ, ಆ್ಯಕ್ಷನ್ ಹೋರಿ, ಪೀಪಿ ಹೋರಿ ಹೀಗೆ ವಿವಿಧ ರೀತಿಯಲ್ಲಿ ಹೋರಿಗಳನ್ನು ವಿಂಗಡಿಸಿ ಓಡಿಸಲಾಯಿತು.
ಅಖಾಡದಲ್ಲಿ ಕುಳಗದ ಹಿಂದೂ ಸಾಮ್ರಾಟ, ಕಪ್ಪಗಳಲೆ ಹಿಂದೂ ದೊರೆ, ಸೊರಬದ ಸೈಕೋ, ಮನೆಮನೆ ಅಧೀರ, ಕುಂಬತ್ತಿ ಆ್ಯಕ್ಷನ್ ಕಿಂಗ್, ಜಕ್ಕನಹಳ್ಳಿ ಛಲಗಾರ, ಹೆಸರಿಯ ದುರಂತ, ಹರೂರು ಜೈ ಹನುಮಾ, ಶಿಗ್ಗಾದ ಮೆಜೆಸ್ಟಿಕ್ ಹುಲಿ, ಹೊನ್ನಾಳಿ ಬ್ರಹ್ಮ, ಕುಂಬತ್ತಿ ಕಲ್ಲೇಶ, ನೇರಲಗಿಯ ಅಂಬಿಗರಡಾನ್, ಮಲೆನಾಡು ಮಹಾರಾಜ, ಚಿಕ್ಕಶಕುನದ ಏಕಲವ್ಯ, ಶರಾವತಿ ಎಕ್ಸ್‌ಪ್ರೆಸ್‌, ಹರಗಿ ವಾರಸ್ದಾರ, ಸಾರೇಕೊಪ್ಪ‌ ಸರದಾರ, ಶಿರಾಳಕೊಪ್ಪದ ಎಚ್.ಎಫ್, ಡಾನ್, ಶಿಡ್ಡಿಹಳ್ಳಿ ದೊರೆ, ತಂಡಿಗೆಯ ಈಡಿಗರ ಹುಲಿ, ಓಟೂರಿನ ಮೀಸೆ ದರ್ಬಾರ್, ಶಿಕಾರಿಪುರದ ಕರ್ನಾಟಕ ರತ್ನಾ, ಹಳೇಸೊರಬದ ಹುಚ್ಚಾ, ಅಧೀರ, ರಾಕ್ ಸ್ಟಾರ್ ಸೇರಿದಂತೆ ವಿವಿಧ ಹೆಸರಿನ ಹೋರಿಗಳು ಓಡಿದವು. ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡರು. ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದವು.

ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲಪ್ರದರ್ಶನ ತೋರಿದ ಪೈಲ್ವಾನರನ್ನು ಸಮಿತಿ ವತಿಯಿಂದ ಗುರುತಿಸಲಾಯಿತು. ಅಖಾಡದ ಎರಡು ಬದಿಯಲ್ಲಿ ಬೇಲಿ ನಿರ್ಮಿಸಿ, ಒಂದೊಂದೆ ಹೋರಿಗಳನ್ನು ಓಡಿಸುವ ಮೂಲಕ ಸಮಿತಿಯವರು ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

                   

Tags: Bull Bullying FestivalKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಮಿಂಚಿನ ಓಟಶಿವಮೊಗ್ಗ_ನ್ಯೂಸ್ಸೊರಬಹೋರಿ ಬೆದರಿಸುವ ಹಬ್ಬ
Share196Tweet123Send
Previous Post

ಬೆಂಗಳೂರು | ಡಿ.22ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ | ಎರಡು ಪ್ರಾಕಾರದ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ

Next Post

ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಏಕಾತ್ಮ ಮಾನವ್ ದರ್ಶನ ಕಾರ್ಯಕ್ರಮಕ್ಕೆ ಅಡ್ಡಿ ಯತ್ನ: ಕಾಂಗ್ರೆಸ್ ವಿರುದ್ಧ ಡಾ. ಸುಶ್ರುತ ಗೌಡ ಟೀಕೆ

ಏಕಾತ್ಮ ಮಾನವ್ ದರ್ಶನ ಕಾರ್ಯಕ್ರಮಕ್ಕೆ ಅಡ್ಡಿ ಯತ್ನ: ಕಾಂಗ್ರೆಸ್ ವಿರುದ್ಧ ಡಾ. ಸುಶ್ರುತ ಗೌಡ ಟೀಕೆ

March 26, 2026
ಆಧ್ಯಾತ್ಮಿಕ ಚಿಂತನೆಗಳ ಸಮಗ್ರ ಅನುಷ್ಠಾನ ತಿಳುವಳಿಕೆಗೆ ಮಾದರಿ: ಸುರೇಶ್ ಋಗ್ವೇದಿ

ಆಧ್ಯಾತ್ಮಿಕ ಚಿಂತನೆಗಳ ಸಮಗ್ರ ಅನುಷ್ಠಾನ ತಿಳುವಳಿಕೆಗೆ ಮಾದರಿ: ಸುರೇಶ್ ಋಗ್ವೇದಿ

March 26, 2026
ಶಿವಮೊಗ್ಗದಲ್ಲಿ ಹೊತ್ತಿ ಉರಿದ ಗೂಡ್ಸ್ ಲಾರಿ

ಶಿವಮೊಗ್ಗದಲ್ಲಿ ಹೊತ್ತಿ ಉರಿದ ಗೂಡ್ಸ್ ಲಾರಿ

March 26, 2026
ರೋಸ್ಟರ್ ಬಿಂದುಗಳಲ್ಲಿರುವ ದೋಷ ಸರಿಪಡಿಸಿದ ಬಳಿಕ ಒಳಮೀಸಲಾತಿ ಜಾರಿಗೊಳಿಸಿ: ಗುರುಮೂರ್ತಿ ಆಗ್ರಹ

ರೋಸ್ಟರ್ ಬಿಂದುಗಳಲ್ಲಿರುವ ದೋಷ ಸರಿಪಡಿಸಿದ ಬಳಿಕ ಒಳಮೀಸಲಾತಿ ಜಾರಿಗೊಳಿಸಿ: ಗುರುಮೂರ್ತಿ ಆಗ್ರಹ

March 26, 2026
ಹೊಳೆಹೊನ್ನೂರು | ಕಾರು ಡಿಕ್ಕಿಯಾಗಿ ಪಾದಚಾರಿ ಸಾವು | ಹಾರಿ ಪಲ್ಟಿಯಾಗಿ ಬಿದ್ದ ಕಾರು

ಹೊಳೆಹೊನ್ನೂರು | ಕಾರು ಡಿಕ್ಕಿಯಾಗಿ ಪಾದಚಾರಿ ಸಾವು | ಹಾರಿ ಪಲ್ಟಿಯಾಗಿ ಬಿದ್ದ ಕಾರು

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL