ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಅತಿಥಿ ಉಪನ್ಯಾಸಕರು #Guest Lecturer ಗೌರವ ಧನ ಹೆಚ್ಚಳ #Increase Remuneration ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಧರಣಿ ನಡೆಸುತ್ತಿದ್ದ ವೇಳೆ ಅಸ್ವಸ್ಥಗೊಂಡ ಅತಿಥಿ ಉಪನ್ಯಾಸಕಿಗೆ ಪ್ರಥಮ ಚಿಕಿತ್ಸೆ #First Aid ನೀಡಿದ್ದಾರೆ.
ಖುದ್ದು ತಾವೇ ಬೆಳಗಾವಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ಕರ್ತವ್ಯ ಪ್ರಜ್ಞೆಯ ಜೊತೆಗೆ ಮಾನವೀಯತೆ ಮರೆದಿದ್ದಾರೆ.
Also read: ಕೊಡಗಿನ ಬೆಡಗಿ ವಿಶ್ವ ಸೌಂದರ್ಯ ಸ್ಪರ್ಧೆಗೆ ಆಯ್ಕೆ | ಯಾರವರು?

ಸಚಿವರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಧರಣಿ ನಿರತರನ್ನು ಕುರಿತು ಮಾತನಾಡುವ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕಿಯೊಬ್ಬರು ದಿಢೀರನೇ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಡಾ.ಧನಂಜಯ ಸರ್ಜಿ ಅವರು ಸ್ಥಳದ್ಲಲೇ ಪ್ರಥಮ ಚಿಕಿತ್ಸೆ ನೀಡಿ, ಖುದ್ದು ತಾವೇ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಕರ್ತವ್ಯ ಪ್ರಜ್ಞೆ ಮರೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post