ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ಹೊಸಮನೆಯ ಕೇಶವಾಪುರ ಬಡಾವಣೆಯ ನಿವೃತ್ತ ಪ್ರಾಂಶುಪಾಲರೊಬ್ಬ ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ವರದಿಯಾಗಿದೆ.
Also read: ಶ್ರೀರಂಗಪಟ್ಟಣ ರಂಗನಾಥಸ್ವಾಮಿ ದೇವಾಲಯದ 1198 ಎಕರೆ ಒತ್ತುವರಿ | ಸರ್ಕಾರ ಹೇಳಿದ್ದೇನು?
ಮನೆಯವರೆಲ್ಲ ಶೀಶೈಲಕ್ಕೆ ತೆರಳಿ ಹಿಂತಿರುಗಿದಾಗ ಮನೆಯ ಬಾಗಿಲಿನ ಇಂಟರ್ ಲಾಕ್ ಮುರಿದು ಕಳ್ಳತನ ಮಾಡಿರುವುದು ಗೊತ್ತಾಗಿದೆ. ಕಬೋರ್ಡ್ ಮತ್ತು ಬೀರುವಿನಲ್ಲಿಟ್ಟಿದ್ದ 15 ಸಾವಿರ ರೂ. ನಗದು, 87 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಒಟ್ಟು 4.35 ಲಕ್ಷ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ಮನೆ ಮಾಲೀಕ ಗೋಪಾಲ ರಾವ್ ದೂರಿನಲ್ಲಿ ತಿಳಿಸಿದ್ದಾರೆ.
ಹೊಸಮನೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post