ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ರಾಜ್ಯ ಸರ್ಕಾರದ ಶಕ್ತಿ ಯೋಜನೆಯ #Shakti Yojane ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್ ಗಳನ್ನು ಖರೀದಿಸಿದ್ದು, ಬರುವ ಮಾರ್ಚ ಅಂತ್ಯದೊಳಗೆ ಮತ್ತಷ್ಟು ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ #Minister Santhosh Lad ಅವರು ಹೇಳಿದರು.
ಈಗಾಗಲೇ ನಾಲ್ಕೂ ಸಾರಿಗೆ ನಿಗಮಗಳಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ #Recruitment of Driving Staff ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವರು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಎಸ್ ವಿ ಸಂಕನೂರ ಅವರ ಕೇಳಿದ ಪ್ರಶ್ನೆಗೆ ಸಾರಿಗೆ ಮತ್ತು ಮುಜರಾಯಿ ಸಚಿವರ ಪರವಾಗಿ ಉತ್ತರಿಸಿದರು.
Also read: ಭದ್ರಾವತಿ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post