ಕಲ್ಪ ಮೀಡಿಯಾ ಹೌಸ್ | ಬೀದರ್ |
ಈಗಾಗಲೇ ಚಳಿಯಿಂದ ತತ್ತರಿಸಿಹೋಗಿರುವ ಜಿಲ್ಲೆಯ ಜನರಿಗೆ ಮತ್ತೊಂದು ಆಘಾತಕಾರಿ ಎಚ್ಚರಿಕೆ ಹವಾಮಾನ ಇಲಾಖೆಯಿಂದ ಹೊರಬಿದ್ದಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ #Cold Wind ಬೀಸುವ ಮುನ್ಸೂಚನೆ ನೀಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ ಬೀಸುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ #Red Alert ಘೋಷಣೆ ಮಾಡಲಾಗಿದೆ.
ಈವರೆಗೂ 10 ರಿಂದ 12 ಡಿಗ್ರಿ ಇದ್ದ ತಾಪಮಾನ ಏಕಾಏಕಿ 7 ಡಿಗ್ರಿಗೆ ಇಳಿಕೆಯಾಗಿದೆ. ಇದರ ಬೆನ್ನಲ್ಲೇ ಮುಂದಿನ ಮೂರು ದಿನಗಳಲ್ಲಿ ಕನಿಷ್ಟ 5 ರಿಂದ 6 ಡಿಗ್ರಿಗೆ ಇಳಿಕೆಯಾಗುವ ಎಚ್ಚರಿಕೆ ನೀಡಿದೆ.
Also read: ಕಣಿವೆ ರಾಜ್ಯದಲ್ಲಿ ಗುಂಡಿನ ಸದ್ದು | ಐವರು ಉಗ್ರರನ್ನು ಸದೆ ಬಡಿದ ವೀರಯೋಧರು
ಸೂರ್ಯೋದಯಕ್ಕಿಂತ ಮುಂಚೆ ಅಥವಾ ಸೂರ್ಯಾಸ್ತದ ನಂತರ ವಾಕಿಂಗ್ ಮಾಡುವವರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಸಾರ್ವಜರಿಗೆ ಸೂಚನೆ ನೀಡಿದೆ.
ಈಗಾಗಲೇ ಕಳೆದ ಒಂದು ವಾರದಿಂದ ಭಾರೀ ಶೀತಗಾಳಿಯಿಂದ ಗಡಿ ಜಿ¯್ಲೆ ಬೀದರ್‌ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ.
ಚಳಿಗೆ ಮನೆಯಿಂದ ಹೊರಗೆ ಬರಲು ಜನರು ಹಿಂದೇಟು ಹಾಕುತ್ತಿದ್ದು, ಚಳಿಯಿಂದ ತಪ್ಪಿಸಿಕೊಳ್ಳಲು ಗುಂಪು ಗುಂಪಾಗಿ ಬೆಂಕಿ ಹಾಕಿ ಚಳಿ ಕಾಯಿಸುತ್ತಿದ್ದಾರೆ. ಮೊದಲ ಬಾರಿಗೆ ಇಷ್ಟೊಂದು ಕಡಿಮೆ ಪ್ರಮಾಣದ ತಾಪಮಾನ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post