ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸೈಬರ್ ವಂಚನೆಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಂಗಳೂರಿನ ಇಂಜಿನಿಯರ್ ಒಬ್ಬರಿಗೆ ಡಿಜಿಟಲ್ ಅರೆಸ್ಟ್ #DigitalArrest ಮಾಡಿ ಬರೋಬ್ಬರಿ 11.83 ಕೋಟಿ ರೂ. ಹಣವನ್ನು ವಂಚನೆ ಮಾಡಲಾಗಿದೆ.
ಬೆಂಗಳೂರಿನ ಇಂಜಿನಿಯರ್ ವಿಜಯ್ ಕುಮಾರ್ ಎನ್ನುವವರಿಗೆ ಡಿಜಿಟಲ್ ಅರೆಸ್ಟ್ ನೆಪದಲ್ಲಿ ಈ ವಂಚನೆ ನಡೆದಿದೆ.
ಮುಂಬೈ ಕೊಲಾಬಾ ಠಾಣೆಯಿಂದ ಎಂದು ಹೇಳಿಕೊಂಡು ವಿಜಯ್ ಕುಮಾರ್ ಅವರಿಗೆ ಕರೆ ಮಾಡಿದ ವಂಚಕರು ನಿಮ್ಮ ಆಧಾರ್ ಕಾರ್ಡ್ ಮೂಲಕ ಮನಿ ಲಾಂಡರಿಂಗ್ ನಡೆದಿದೆ. ಇದರ ಮೂಲಕ 6 ಕೋಟಿ ರೂ. ಮನಿ ಲಾಂಡರಿಂಗ್ #MoneyLaundering ನಡೆದಿದ್ದು, ಇದರ ಪ್ರಕರಣ ಸುಪ್ರೀಂ ಕೋರ್ಟ್’ನಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಹೆದರಿಸಿದ್ದಾರೆ.
ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ನೀವು ಮನೆ ಬಿಟ್ಟು ಎಲ್ಲೂ ಹೋಗುವಂತಿಲ್ಲ, ವೀಡಿಯೋ ಕಾಲ್ ಮೂಲಕ ನಮ್ಮ ಸಂಪರ್ಕದಲ್ಲಿಯೇ ಇರಬೇಕು ಎಂದು ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ.
Also Read>> ಸಿ.ಟಿ. ರವಿ ವಿರುದ್ಧ ದಾಖಲೆ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್ | ಬಿಜೆಪಿಗೆ ಸವಾಲ್
ಈ ರೀತಿ ಪೊಲೀಸ್ ಅಧಿಕಾರಿಗಳು ಎಂದು ಹೇಳಿ ಹೆದರಿಸಿ ಡಿಜಿಟಲ್ ಅರೆಸ್ಟ್ ಮಾಡಿ ವಿಜಯ್ ಕುಮಾರ್ ಅವರಿಂದ ಹಂತ ಹಂತವಾಗಿ 11.83 ಕೋಟಿ ರೂ. ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತಂತೆ ಬೆಂಗಳೂರಿನ ಈಶಾನ್ಯ ವಿಭಾಗದ ಸೆನ್ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post