ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendra Swamy Mutt ಮಂತ್ರಾಲಯ #Manthralaya ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ #Subhudendrathirtha Shri ಅಮೃತ ಹಸ್ತದಿಂದ ಧನುರ್ಮಾಸ ದ್ವಾದಶಿ ಪ್ರಾತಃಕಾಲದ ವಿಶೇಷ ಪೂಜೆ ನೆರವೇರಿತು.
ಶ್ರೀಗಳು ಮೂಲರಾಮಚಂದ್ರದೇವರ ಸಂಸ್ಥಾನ ಪೂಜೆ, ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಮಹಾಮಂಗಳಾರತಿಯನ್ನು ನೆರವೇರಿಸಿದರು.
Also read: ರಾಜ್ಯೋತ್ಸವ ಸಮಾರಂಭ | ‘ಕೆಂಪೇಗೌಡ ಪ್ರಶಸ್ತಿ’ ವಿಜೇತೆ ದಿಯಾ ಭರತನಾಟ್ಯ ಪ್ರದರ್ಶನ
ಈ ಸಂದರ್ಭದಲ್ಲಿ ಶ್ರೀ ಮಠದ ಹಿರಿಯ ವ್ಯವಸ್ಥಾಪಕ ಆರ್. ಕೆ. ವಾದೀಂದ್ರಾಚಾರ್ ಹಾಗೂ ಭಕ್ತರು ಶಿಷ್ಯರು ಪೂಜೆಯಲ್ಲಿ ಭಕ್ತಿಯಿಂದ ಭಾಗವಹಿಸಿದ್ದರು ಎಂದು ಪುರೋಹಿತರಾದ ನಂದಕಿಶೋರ್ ಆಚಾರ್ಯರು ತಿಳಿಸಿದರು. ಇದೇ ಸಂದರ್ಭದಲ್ಲಿ ನೂರಾರು ಭಕ್ತರು ಶ್ರೀಗಳಿಂದ ತೀರ್ಥ ಫಲ ಮಂತ್ರಾಕ್ಷತೆ ಪ್ರಸಾದ ಸ್ವೀಕರಿಸಿ ಶ್ರೀಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 















