ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೈಸೂರು – ತಾಳಗುಪ್ಪ ನಡುವಿನ ರಾತ್ರಿ ರೈಲಿನಲ್ಲಿ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಮೂರೇ ದಿನದಲ್ಲಿ ಬೇಧಿಸಿರುವ ರೈಲ್ವೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯ ಧರ್ಮನಾಯ್ಕ್ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕದ್ದ ಮಾಂಗಲ್ಯ ಸರವನ್ನು ತನ್ನೂರಿನಲ್ಲಿ ಮಾರಾಟ ಮಾಡಲು ತೆರಳುವಾಗ ಈತ ಸಿಕ್ಕಿ ಬಿದ್ದಿದ್ದಾನೆ.

Also read: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ
ಆನಂದಪುರ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆತ ಸ್ಪಷ್ಟ ಮಾಹಿತಿ ನೀಡಿರಲಿಲ್ಲ. ವಿಚಾರಣೆ ತೀವ್ರಗೊಳಿಸಿದಾಗ ಮಾಂಗಲ್ಯ ಸರ ಕಳ್ಳತನ ಮಾಡಿದ್ದನ್ನು ಬಾಯಿಬಿಟ್ಟಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದಲ್ಲಿ 72 ಗಂಟೆಯಲ್ಲಿ ಆರೋಪಿಯನ್ನು ಪತ್ತೆಹಚ್ಚಿದ ಆರ್’ಪಿ ಎಫ್ ಇನ್’ಸ್ಪೆಕ್ಟರ್ ಬಿ.ಕೆ. ಪ್ರಕಾಶ್ ಮತ್ತು ತಂಡಕ್ಕೆ ಐಜಿ ಗೌರವಿಸಿ ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post