ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೈಕ್ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ತಿಳಿದು ಪತ್ನಿ ನೇಣಿಗೆ ಶರಣಾದ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ಬೆಸಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿವಾಸಿ ಮಂಜುನಾಥ್ (25)ಗೆ ಮಂಗಳವಾರ ಶಿಕಾರಿಪುರದ ಬಳಿ ಅಪಘಾತವಾಗಿ ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಡೆ ಫಲಕಾರಿಯಾಗದೆ ಬುಧವಾರ) ಮೃತಪಟ್ಟಿದ್ದಾರೆ. ಪತಿ ಮಂಜುನಾಥ್ ಸಾವಿನಿಂದ ಮನನೊಂದ ಪತ್ನಿ ಅಮೃತ (21) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
Also read: ವಿದ್ಯಾರ್ಥಿಗಳ ವೈಜ್ಞಾನಿಕ ಪ್ರತಿಭೆಗೆ ವೇದಿಕೆ | ರೆಡಿಯನ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ
ಮಂಜುನಾಥ್ ಹಾಗೂ ಅಮೃತ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇದೀಗ ದಂಪತಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಹೊಸನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















