ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜ.4ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Also read: ರಾಜಧಾನಿಯಲ್ಲಿ 4-5 ರಂದು ಸಂಗೀತ ಮಹೋತ್ಸವ | ವಿದುಷಿ ರಂಜಿನಿ ಸಿದ್ಧಾಂತಿ ಸಾರಥ್ಯ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಎಂಸಿಎಫ್-1, ಎಂಸಿಎಫ್-3 ಎಂಸಿಎಫ್-4, ಎಂಸಿಎಫ್-14 ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ಮತ್ತು ಎಂಸಿಎಫ್-27 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ,
ಮೆ. ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕೊಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಕೆಎಂಎಫ್ ಡೈರಿ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post