No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೈಸೂರು ಜಿಲ್ಲೆಗೆ ಸಾಲು ಸಾಲು ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಸಾಂಸ್ಕೃತಿಕ ನಗರಿ ಹಾಗೂ ಜಿಲ್ಲೆಗೆ ಕೇಂದ್ರ ಸರ್ಕಾರ ಏನೆಲ್ಲಾ ಅನುಮತಿ ನೀಡಿದೆ?

kalpa News by kalpa News
January 8, 2025
in ರಾಷ್ಟ್ರೀಯ
0
ಮೈಸೂರು ಜಿಲ್ಲೆಗೆ ಸಾಲು ಸಾಲು ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ #Ashwin Vaishnav ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರಿಗೆ ಭರವಸೆ ನೀಡಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರ ಮನವಿಗೆ ತತ್ ಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಅವರು; ಇದು ಅತ್ಯಂತ ಮಹತ್ವದ ಪ್ರಸ್ತಾವನೆ. ಈ ಬಗ್ಗೆ ಖುದ್ದು ತಾವೇ ಗಮನ ಹರಿಸುವುದಾಗಿ ತಿಳಿಸಿದರು.

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ತೆರೆಯುವಂತೆ ರೇಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು ಕುಮಾರಸ್ವಾಮಿ ಅವರು. ರೇಲ್ವೆ ಸುರಕ್ಷತೆಗೆ ಮೈಸೂರು ಭಾಗದಲ್ಲಿ ಹೆಚ್ಚು ಆದ್ಯತೆ ಕೊಡಬೇಕಿದೆ ಹಾಗೂ ಈ ಭಾಗದಲ್ಲಿ ಪ್ರಯಾಣಿಕರ ದಟ್ಟಿಣಿಯು ಹೆಚ್ಚಾಗಿದ್ದು, ಒಟ್ಟಾರೆ ರೇಲ್ವೆ ಸುರಕ್ಷತೆಯು ಮಹತ್ವದ ಅಂಶವಾಗಿದೆ ಎಂದು ಕುಮಾರಸ್ವಾಮಿ ಅವರು ರೇಲ್ವೆ ಸಚಿವರಿಗೆ ಮನವಿ ಮಾಡಿಕೊಟ್ಟರು. ಈ ಬಗ್ಗೆ ತಕ್ಷಣವೇ ಗಮನ ಹರಿಸುವುದಾಗಿ ರೇಲ್ವೆ ಸಚಿವರು ಭರವಸೆ ನೀಡಿದರು.
ದೇವೇಗೌಡರು #Devegowda ಪ್ರಧಾನಿಯಾಗಿದ್ದಾಗ ಕೆ.ಆರ್.ನಗರದಲ್ಲಿದ್ದ ಹಳೆಯ ರೈಲು ನಿಲ್ದಾಣವನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಹಳೆಯ ನಿಲ್ದಾಣದ ಜಾಗ ಹಾಗೆಯೇ ಖಾಲಿ ಉಳಿದಿದ್ದು, ಭೂಸ್ವಾಧೀನದ ಸಮಸ್ಯೆ ಇಲ್ಲ ಎಂದು ಅಶ್ವಿನಿ ವೈಷ್ಣವ ಅವರಿಗೆ ಸಚಿವರು ಮನವರಿಕೆ ಮಾಡಿಕೊಟ್ಟರು.

ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ಬಂದರೆ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಸ್ಥಳೀಯ ಯುವಕರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ದುಡಿಮೆಗೆ ಅವಕಾಶ ಲಭ್ಯವಾಗುತ್ತದೆ. ಮೈಸೂರು ಭಾಗದ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಸಚಿವರು ಹೇಳಿದರು.

ಇದಲ್ಲದೆ; ರಾಜ್ಯದಲ್ಲಿ ಬಾಕಿ ಇರುವ ವಿವಿಧ ರೇಲ್ವೆ ಯೋಜನೆಗಳನ್ನು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಕುಮಾರಸ್ವಾಮಿ ಅವರು ರೇಲ್ವೆ ಸಚಿವರ ಜತೆ ಚರ್ಚಿಸಿದರು.

ರಾಮನಗರ – ಚನ್ನಪಟ್ಟಣ ನಡುವೆ ರೇಲ್ವೆ ಲೆವೆಲ್ ಕ್ರಾಸಿಂಗ್ -44/100-200 ಬಳಿ ರೇಲ್ವೆ ಮೇಲು ಸೇತುವೆ (ಫ್ಲೈ ಓವರ್) ನಿರ್ಮಾಣದ ಬಗ್ಗೆಯೂ ಕುಮಾರಸ್ವಾಮಿ ಅವರು ಸಲ್ಲಿಸಿದ ಮನವಿಗೆ ರೇಲ್ವೆ ಸಚಿವರು ಒಪ್ಪಿಗೆ ನೀಡಿದರು. ಈ ಬಗ್ಗೆಯೂ ಕೂಡಲೇ ಕ್ರಮ ವಹಿಸುವುದಾಗಿ ಅವರು ಭರವಸೆ ನೀಡಿದರು.

ಬೆಂಗಳೂರು – ಮಂಗಳೂರು ನಡುವಿನ ರೇಲ್ವೆ ಮಾರ್ಗದಲ್ಲಿ ಪ್ರಮುಖದ್ದಾಗಿರುವ ಸಕಲೇಶಪುರ ರೇಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಮನವಿಗೂ ಸ್ಪಂದಿಸಿದ ಸಚಿವರು, ಈ ಕಾರ್ಯವನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಿ ಅತ್ಯಾಧುನಿಕ ರೇಲ್ವೆ ನಿಲ್ದಾಣ ನಿರ್ಮಾಣ ಮಾಡುವುದಾಗಿ ಅಶ್ವಿನಿ ವೈಷ್ಣವ ಅವರು ಸಚಿವರಿಗೆ ತಿಳಿಸಿದರು.
ರೇಲ್ವೆ ಸಚಿವರಿಗೆ ಹೆಚ್ ಡಿ ಮಾಡಿದ ಮನವಿಗಳು:

  • ಚನ್ನಪಟ್ಟಣ – ಬೆಂಗಳೂರು – ಮೈಸೂರು ವಿಭಾಗದಲ್ಲಿ ಪ್ರಮುಖವಾದ ಎಲ್ಲಾ ರೇಲುಗಳ ನಿಲುಗಡೆ.
  • ಹಾಸನ, ಮಂಗಳೂರು ಒಳಗೊಂಡ ಮುಂಬಯಿ – ಬೆಂಗಳೂರು – ಮುಂಬಯಿ  ಮಾರ್ಗದಲ್ಲಿ ಹೊಸ ರೈಲಿಗೆ ಮಂಜೂರು.
  • ಮದ್ದೂರು ಮತ್ತು ಮಂಡ್ಯದಲ್ಲಿ ಬೆಂಗಳೂರು – ಮಂಗಳೂರು – ಮುರುಡೇಶ್ವರ ನಡುವೆ ಸಂಚರಿಸುವ 16585 ರೇಲಿನ ನಿಲುಗಡೆ.
  • ಕೊಪ್ಪಳ ಜಿಲ್ಲೆಯಲ್ಲಿ ಹೊಸ ಬ್ರಾಡ್ ಗೇಜ್ ರೇಲ್ವೆ ಮಾರ್ಗಗಳ ಮಂಜೂರಾತಿ.
  • ಹೆಜ್ಜಾಲ- ಕನಕಪುರ – ಮಳವಳ್ಳಿ – ಕೊಳ್ಳೇಗಾಲ – ಯಳಂದೂರು – ಚಾಮರಾಜನಗರ ರೈಲು ಮಾರ್ಗಕ್ಕೆ ಶೀಘ್ರ ಅನುಮತಿ.

ರಾಜ್ಯಕ್ಕೆ ಸಂಬಂಧಪಟ್ಟ ಇಷ್ಟೂ ಮನವಿಗಳಿಗೆ ರೇಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ರೇಲ್ವೆ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲಾಗುವುದು ಹಾಗೂ ಹೊಸ ಯೋಜನೆಗಳ ಬಗ್ಗೆಯೂ ಅಗತ್ಯ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಇಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Also read: ಗಮನಿಸಿ! ರೈಲ್ವೆ ಇಲಾಖೆಯಲ್ಲಿ 1000 ಹುದ್ದೆ ನೇಮಕಾತಿ | ಯಾರೆಲ್ಲಾ ಅರ್ಹರು? ಅರ್ಜಿ ಹಾಕುವುದು ಹೇಗೆ?

ಉಕ್ಕು ಮತ್ತು ಅದಿರು ಸಾಗಣಿಕೆಗೆ ರೇಲ್ವೆ ಸಹಕಾರ:

ದೇಶಾದ್ಯಂತ ಉಕ್ಕು ಮತ್ತು ಅದಿರು ಸಾಗಾಣಿಕೆಗೆ ರೇಲ್ವೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಉಕ್ಕು ಸಚಿವರಿಗೆ ರೇಲ್ವೆ ಸಚಿವರು ಭರವಸೆ ಕೊಟ್ಟರು.

ರೇಲ್ವೆ ವಶದಲ್ಲಿರುವ ಖಾಲಿ ಜಾಗದಲ್ಲಿ ಅದಿರು ಸಾಗಾಣಿಕೆಗೆ ಪೈಪ್ ಲೈನ್ ನಿರ್ಮಾಣಕ್ಕೆ ಅವಕಾಶ, ಅದಿರು ಮತ್ತು ಉಕ್ಕು ಸಾಗಾಣಿಕೆಗೆ ಹೆಚ್ಚುವರಿ ರಾಕ್ ಗಳನ್ನು ಒದಗಿಸಬೇಕು ಎಂಬ ಮಾನವಿಗೂ ರೇಲ್ವೆ ಸಚಿವರು ಸ್ಪಂದಿಸಿದರು. ಜತೆಗೆ, ಇಬ್ಬರು ಸಚಿವರೂ ರಾಷ್ಟ್ರದ ಅಭಿವೃದ್ಧಿ ಬಗ್ಗೆ ಹಲವಾರು ವಿಷಯಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು.

ಇದೇ ವೇಳೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರ ಜತೆ ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಕಾಶೆಂಪೂರ್ ಹಾಗೂ ಸಾ.ರಾ.ಮಹೇಶ್ ಅವರು ಇದ್ದರು.

₹150ರಿಂದ 200 ಕೋಟಿ ಹೂಡಿಕೆ; ಪ್ರತೀ ವರ್ಷ 600 ಮಂದಿಗೆ ತರಬೇತಿ

ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ ಸ್ಥಾಪನೆ  ಬಗ್ಗೆ ಕೇಂದ್ರ ಸಚಿವರ ಜತೆಯಲ್ಲಿದ್ದು ರೇಲ್ವೆ ಸಚಿವರಿಗೆ ಮನವಿ ಸಲ್ಲಿಸಿದ ವೇಳೆ ಉಪಸ್ಥಿತರಿದ್ದ ಸಾ.ರಾ.ಮಹೇಶ್ ಅವರು ಮತ್ತಷ್ಟು ಮಾಹಿತಿ ಹಂಚಿಕೊಂಡರು.

ತರಬೇತಿ ಕೇಂದ್ರಕ್ಕೆ ಕೇಂದ್ರ ಸರ್ಕಾರ ₹150ರಿಂದ 200 ಕೋಟಿ ಹೂಡಿಕೆ ಮಾಡಲಿದೆ. ಪ್ರತೀ ವರ್ಷ 600 ಮಂದಿಗೆ ತರಬೇತಿ ದೊರೆಯಲಿದೆ. ಮೈಸೂರು ಅದರಲ್ಲಿಯೂ ಕೆ ಆರ್ ನಗರ ತಾಲೂಕು ಅಭಿವೃದ್ಧಿಗೆ ದೊಡ್ಡ ಕೊಡುಗೆ ಸಿಕ್ಕಿದಂತೆ ಆಗುತ್ತದೆ. ಸ್ಥಳೀಯರಿಗೆ ಹೆಚ್ಚೆಚ್ಚು ಉದ್ಯೋಗ ಲಭ್ಯವಾಗಲಿದೆ. ಈ ಸಂಬಂಧ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಹಾಗೂ ಮಂಡ್ಯ ಸಂಸದರು, ಕೇಂದ್ರದ ಬೃಹತ್ ಕೈಗಾರಿಕೆ – ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Ashwin VaishnavDevegowdaH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_Kannadaಅಶ್ವಿನಿ ವೈಷ್ಣವದೇವೇಗೌಡನವದೆಹಲಿಹೆಚ್.ಡಿ. ಕುಮಾರಸ್ವಾಮಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ರೈಲ್ವೆ ಇಲಾಖೆಯಲ್ಲಿ 1000 ಹುದ್ದೆ ನೇಮಕಾತಿ | ಯಾರೆಲ್ಲಾ ಅರ್ಹರು? ಅರ್ಜಿ ಹಾಕುವುದು ಹೇಗೆ?

Next Post

ರಾಜ್ಯದ 14 ಜಿಲ್ಲೆ, 41 ತಾಲ್ಲೂಕು, 1199 ಗ್ರಾಪಂಗಳಲ್ಲಿ ಅಟಲ್ ಭೂಜಲ ರಥಕ್ಕೆ ಚಾಲನೆ | ಏನಿದರ ವಿಶೇಷ?

kalpa News

kalpa News

Next Post
ರಾಜ್ಯದ 14 ಜಿಲ್ಲೆ, 41 ತಾಲ್ಲೂಕು, 1199 ಗ್ರಾಪಂಗಳಲ್ಲಿ ಅಟಲ್ ಭೂಜಲ ರಥಕ್ಕೆ ಚಾಲನೆ | ಏನಿದರ ವಿಶೇಷ?

ರಾಜ್ಯದ 14 ಜಿಲ್ಲೆ, 41 ತಾಲ್ಲೂಕು, 1199 ಗ್ರಾಪಂಗಳಲ್ಲಿ ಅಟಲ್ ಭೂಜಲ ರಥಕ್ಕೆ ಚಾಲನೆ | ಏನಿದರ ವಿಶೇಷ?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL