ಕಲ್ಪ ಮೀಡಿಯಾ ಹೌಸ್ | ತಿರುಪತಿ |
ವೈಕುಂಠ ಏಕಾದಶಿಗೂ #VaikuntaEkadashi ಮುನ್ನ ಭೂವೈಕುಂಠ ತಿರುಪತಿಯಲ್ಲಿ ಭಾರೀ ಅನಾಹುತ ಸಂಭವಿಸಿದ್ದು, ಇಂದು ಸಂಜೆ ನಂತರ ನಡೆದ ಕಾಲ್ತುಳಿತದಲ್ಲಿ 6 ಭಕ್ತರು ಸಾವನ್ನಪ್ಪಿ, ಹಲವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ತಿರುಪತಿ #Tirupati ತಿಮ್ಮಪ್ಪನ ಸನ್ನಿಧಿಯಲ್ಲಿ ಇಂದು ಸಂಜೆ ನಂತರ ಭೀಕರವಾಗಿ ಕಾಲ್ತುಳಿತ ಸಂಭವಿಸಿದ್ದು, ಪರಿಣಾಮವಾಗಿ 6 ಭಕ್ತರು ಸಾವನ್ನಪ್ಪಿದ್ದು, ಬಹಳಷ್ಟು ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ವರದಿಯಾಗಿದೆ.
Also Read>> Minister George Orders Technical Investigation into Bidadi Waste-to-Energy Power Unit incident
ವೈಕುಂಠ ಏಕಾದಶಿಯ ಟಿಕೇಟ್ ಕೊಂಡುಕೊಳ್ಳಲು ಸಾವಿರಾರು ಮಂದಿ ನೆರೆದಿದ್ದರು. ಈ ವೇಳೆ ನೂಕುನುಗ್ಗಲು ಸಂಭವಿಸಿದ್ದು, ಕಾಲ್ತುಳಿತವಾಗಿದೆ.
ಸದ್ಯ ಇನ್ನೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ ಎಂದು ಹೇಳಲಾಗಿದ್ದು, ಪೊಲೀಸರು, ವೈದ್ಯಕೀಯ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಜನವರಿ 10 ರಂದು ವೈಕುಂಠ ಏಕಾದಶಿಯ ಹಿನ್ನಲೆಯಲ್ಲಿ ತಿರುಪತಿಯ ಕೌಂಟರ್‌ಗಳಲ್ಲಿ ನಾಳೆ ಬೆಳಗ್ಗೆಯಿಂದ ಟಿಕೆಟ್ ವಿತರಣೆ ಮಾಡಲು ನಿರ್ಧಾರ ಮಾಡಲಾಗಿತ್ತು. ಈ ವೇಳೆ ಸಾವಿರಾರು ಮಂದಿ ಏಕಕಾಲಕ್ಕೆ ಕೌಂಟರ್ ಬಳಿ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಅಂದಾಜು 25 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಎಲ್ಲರನ್ನೂ ಸ್ಥಳೀಯ ರುಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post